ಬಳ್ಳಾರಿ:04. ನಗರದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿ ನೆರವೇರಿತು. ಈ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ, ರಾಜ್ಯ ಕಾರ್ಯದರ್ಶಿ ರವಿ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಬಳ್ಳಾರಿ ಉಸ್ತುವಾರಿ ಅರ್ಜುನ ಹಲಗೆ ಗೌಡರ, ಜಿಲ್ಲಾಧ್ಯಕ್ಷ ಜೆ ವಿ ಮಂಜುನಾಥ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಪಕ್ಷದ
ಪರಾಜಿತ ಅಭ್ಯರ್ಥಿ ಮಿಂಚೇರಿ ರುದ್ರಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಸಮ್ಮುಖದಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿಗಳ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಹಾಗೂ ಪಕ್ಷ ಸಂಘಟನೆಯು ಯಾವ ರೀತಿ ಮಾಡಿ ಜನಸಾಮಾನ್ಯರ ಬಳಿಗೆ ಹೋಗಿ ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ತಲುಪಿಸಬೇಕು, ಸಾಮಾಜಿಕ ಜಾಲತಾಣ ಯಾವ ರೀತಿ ಬಳಸಿಕೊಳ್ಳಬೇಕು, ಹಾಗೂ ಕಣ್ಣೆದುರಿಗೆ ಕಾಣುವ ಅನೇಕ ಸಾರ್ವಜನಿಕ ಸಮಸ್ಯೆಗಳನ್ನು ಹೇಗೆ ಧ್ವನಿ ಎತ್ತಿ ಪ್ರತಿಭಟಿಸಬೇಕು ಸಮಸ್ಯೆಗಳನ್ನು ಪರಿಹರಿಸಬೇಕು ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು, ಹಾಗೂ ಸಭೆಯಲ್ಲಿ ಅನೇಕರು ಬಳ್ಳಾರಿ ನಗರದ ರಸ್ತೆ ಗುಂಡಿಗಳ ಬಗ್ಗೆ, ಕಾನೂನು ಬಾಹಿರ ಚಟುವಟಿಕೆಗಳು ಹೇಗೆ ನಡೆಯುತ್ತಿವೆ, ಎನ್ನುವುದರ ಬಗ್ಗೆ, ಮೈಕ್ರೋ ಫೈನಾನ್ಸ್ ಸಮಸ್ಯೆಗಳಿಂದ ಜನ ಹೇಗೆ ಪರದಾಡುತ್ತಿದ್ದಾರೆ, ಕಚೇರಿಗಳಲ್ಲಿ ಯಾವ ಯಾವ ರೀತಿ ಭ್ರಷ್ಟಾಚಾರ ನಡೆಯುತ್ತಿದೆ, ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪದಾಧಿಕಾರಿಗಳ ನೇಮಕ: ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಬಳ್ಳಾರಿ ಮಹಾನಗರ ಅಧ್ಯಕ್ಷರಾಗಿ ಡಿ. ಚಕ್ರವರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ಅನುಗ್ರಹ ಸಂತೋಷ ಕುಮಾರ್, ಉಪಾಧ್ಯಕ್ಷರಾಗಿ ಜಾನಕಿ ರಾಮ್, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಿಂಚೇರಿ ರುದ್ರಪ್ಪ, ಬಳ್ಳಾರಿ ಜಿಲ್ಲಾ ಓಬಿಸಿ ಘಟಕದ ಅಧ್ಯಕ್ಷರಾಗಿ ಮಣಿಕಂಠ ಆಚಾರ್, ಸಿರುಗುಪ್ಪ ತಾಲೂಕು ಘಟಕದ ಅಧ್ಯಕ್ಷರಾಗಿ ರಾಮು ನಾಯಕ್, ಜಿಲ್ಲಾ ಭ್ರಷ್ಟಾಚಾರ ವಿರೋಧಿ ಘಟಕದ ಅಧ್ಯಕ್ಷರಾಗಿ ಗಣಪಾಲ್ ರಾಘವ ರೆಡ್ಡಿ, ಜಿಲ್ಲಾ ಕಾರ್ಯದರ್ಶಿಯಾಗಿ ನಾಗರಾಜ್ ಗೌಡ, ಆಟೋ ಚಾಲಕರ ಜಿಲ್ಲಾ ಅಧ್ಯಕ್ಷರಾಗಿ ಬೆಳಗಲ್ಲು ಬಸವರಾಜ್, ಬಳ್ಳಾರಿ ನಗರ ಆಟೋ ಚಾಲಕರ ಘಟಕದ ಅಧ್ಯಕ್ಷರಾಗಿ ರಾಜೇಶ್ (ಜೋಗಿ), ಹಾಗೂ ಮುಂತಾದ ವಾರ್ಡ್ ಘಟಕಗಳ ಪದಾಧಿಕಾರಿಗಳನ್ನು ನೇಮಿಸಲಾಯಿತು. ಈ ಸಂದರ್ಭದಲ್ಲಿ ಅನೇಕ ಪಕ್ಷದ ಪ್ರೇಮಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


