ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ 

Ravi Talawar
ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ 
WhatsApp Group Join Now
Telegram Group Join Now
ಬಳ್ಳಾರಿ:05..call  ಜಾನಪದ ಗೀತೆ ಸಮೂಹದಲ್ಲಿ ಪ್ರಥಮ ಮತ್ತು ಆಂಗ್ಲ ಕಥಾ ರಚನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಹಲ್ಲಾದ ಚೌದರಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ, ಜಿಲ್ಲೆಯ ಸಮಸ್ತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಳ್ಳಾರಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇನ್ನುಳಿದ ಸ್ಪರ್ಧೆಗಳಲ್ಲಿ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ,  ಕವಿತೆ ರಚನಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಚಿತ್ರಕಲೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಜಾನಪದ ಗೀತೆ ಸಮೂಹದಲ್ಲಿ ತೃತೀಯ ಸ್ಥಾನ, ಕನ್ನಡ ಕಥೆ ರಚನೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಭಾಷಣದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಪ್ರೊ ಮೌನಿಕಾ ರಂಜನಿ, ನಾಟಕ ವಿಭಾಗದ ಮುಖ್ಯಸ್ಥ ಡಾ ದಸ್ತಗಿರಿ ಸಾಬ್ ದಿನ್ನಿ,ಸಾಂಸ್ಕೃತಿಕ ಸಂಚಾಲಕಿ ಜ್ಯೋತಿ ಅಣ್ಣಾರಾವ್,ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಕನ್ಯಾಕುಮಾರಿ ಉಡಗಿ, ಸಹ ಪ್ರಾಧ್ಯಾಪಕರು ಡಾ ಗುರುಬಸಪ್ಪ ಎಸ್, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಬಸಪ್ಪ, ಗಣಕ ಯಂತ್ರ ವಿಭಾಗದ ಮುಖ್ಯಸ್ಥೆ ಸುಮಲತ, ಗಣಿತ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಕ್ಕಣ್ಣ ಈ ಎನ್, ಉಪನ್ಯಾಸಕರಾದ ನೇತಿ ರಘುರಾಮ, ವಿಷ್ಣು ಹಡಪದ ಗಂಗಾಧರ ಇದ್ದರು.
WhatsApp Group Join Now
Telegram Group Join Now
Share This Article