ರಾಮದುರ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಜರುಗಿದ ಸಮಾರಂಭದಲ್ಲಿ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಲಭಿಸಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಶಾಲೆಯ ಮುಖ್ಯ ಶಿಕ್ಷಕ ಬಿ.ಬಿ ಹಾಲೊಳ್ಳಿ, ಎಸ್.ಡಿ.ಎಮ್.ಸಿ. ಅಧ್ಯಕ್ಷ ಸತೀಶ ಮಳಲಿ, ಹುಲಕುಂದ ಸಮೂಹ ಸಂಪನ್ಮೂಲ ವ್ಯಕ್ತಿ ವಿ.ಡಿ. ದಳವಾಯಿ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸದಸ್ಯರಿಗೆ ಪ್ರಶಸ್ತಿ ವಿತರಿಸಿದರು.
ಪಿಎಂಶ್ರೀ ಶಾಲೆಯು ಕಳೆದ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದ ಪುಷ್ಟಿ (ಉತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ) ಯೋಜನೆಗೆ ಆಯ್ಕೆಯಾಗಿತ್ತು. ಕೇಂದ್ರ ಪುರಸ್ಕೃತ ಪಿಎಂಶ್ರೀ ಯೋಜನೆಗೆ ಆಯ್ಕೆಯಾಗಿರುವ ತಾಲೂಕಿನ ಕುನ್ನಾಳ ಶಾಲೆ ಗುಣಾತ್ಮಕ ಶಿಕ್ಷಣದ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವತ್ತ ಮುನ್ನುಗ್ಗುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎಂ.ಪಿ. ನರೇಂದ್ರಸ್ವಾಮಿ, ಶಾಸಕ ಆಸೀಪ್ ಸೇಠ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಕಾಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾಧಿಕಾರಿ ಮಹಮ್ಮದ ರೋಶನ್, ಎಸ್‌ಪಿ ಭೀಮಾಶಂಕರ ಗುಳೇದ ಸೇರಿದಂತೆ ಇತರರಿದ್ದರು.
ಕುನ್ನಾಳ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪರಿಸರ ಮಿತ್ರ ಶಾಲೆ ಪ್ರಶಸ್ತಿ


