ಬೆಂಗಳೂರು, ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಸ್ಫೋಟವನ್ನು ಖಂಡಿಸಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಈ ಕುರಿತು ಸಚಿವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, ಸ್ಫೋಟ ಘಟನೆ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಸ್ಫೋಟದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಅವರ ಕುಟುಂಬದ ಜೊತೆ ನಾನಿದ್ದೇನೆ. ಗಾಯಗೊಂಡ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಈ ದುಷ್ಕೃತ್ಯದ ಹಿಂದೆ ಯಾವುದೇ ಶಕ್ತಿಗಳಿರಲಿ ಅವರನ್ನು ಯಾವ ಮುಲಾಜೂ ಇಲ್ಲದೇ ಮಟ್ಟಹಾಕಬೇಕೆಂದು ಆಗ್ರಹಿಸುತ್ತೇನೆ. ಎಂದು ಹೇಳಿದ್ದಾರೆ.


