ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

Ravi Talawar
ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
WhatsApp Group Join Now
Telegram Group Join Now
ಬಳ್ಳಾರಿ,ನ.11.ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
2014 ರಲ್ಲಿ ಪ್ರಾರಂಭಿಸಲಾದ ರಾಷ್ಟಿçÃಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7 ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಕ್ಯಾನ್ಸರ್‌ನ ವಿವಿಧ ರೂಪಗಳು, ಅಪಾಯಕಾರಿ ಅಂಶಗಳು ಮತ್ತು ತಡೆಗಟ್ಟುವಿಕೆ, ಕ್ಯಾನ್ಸರ್ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
*ಮುಂಜಾಗ್ರತೆ ವಹಿಸಬೇಕಾದ ಕ್ರಮ:*
ಧೂಮಪಾನ ಮತ್ತು ತಂಬಾಕು ಸೇವನೆಯು ಬಾಯಿ ಕ್ಯಾನ್ಸರ್ ಮತ್ತು ಶಾಸ್ವಕೋಶ ಕ್ಯಾನ್ಸರ್‌ಗಳಿಗೆ ಪ್ರಮುಖ ಕಾರಣವಾಗಿದ್ದು, ಅತಿಯಾದ ಮದ್ಯಪಾನ ಯಕೃತ್ತು, ಸ್ತನ ಮತ್ತು ಜೀರ್ಣಾಂಗಗಳ ಕ್ಯಾನ್ಸರ್ ಉಂಟಾಗಬಹುದು. ಹಾಗಾಗಿ ಅವುಗಳಿಂದ ದೂರವಿರಬೇಕು ಎಂದಿದ್ದಾರೆ.
ಆರೋಗ್ಯಕರ ಆಹಾರ, ಹಣ್ಣುಗಳು, ತರಕಾರಿಗಳು, ಧಾನ್ಯಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರ ಸೇವಿಸಬೇಕು. ಸಂಸ್ಕರಿಸಿದ ಆಹಾರ ಕಡಿಮೆ ಮಾಡಬೇಕು. ನಿಯಮಿತ ದೈಹಿಕ ಚಟುವಟಿಕೆ ಮಾಡುವುದರಿಂದ ಕ್ಯಾನ್ಸರ್ ಅಪಾಯ ತಡೆಗಟ್ಟಬಹುದಾಗಿದೆ.
ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಚರ್ಮದ ಕ್ಯಾನ್ಸರ್‌ಗೆ ತಡೆಗಟ್ಟಲು ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ನಿಯಮಿತ ಮಮೊಗ್ರಾಮ್‌ಗಳು, ಪ್ಯಾಪ್ ಸ್ಮೀಯರ್‌ಗಳು ಮತ್ತು ಕೊಲೊನೋಸ್ಕೋಪಿಗಳಂತಹ ಸ್ಕಿçÃನಿಂಗ್ ಗಳನ್ನು ಆಗಾಗ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿ ಸೋಮವಾರ ಹಾಗೂ ಗುರುವಾರ ದಿನಗಳಂದು ಹುಬ್ಬಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕ್ಯಾನ್ಸರ್ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಮತ್ತು ಕಿಮೋಥೆರಫಿ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಕೀಮೋಥೆರಫಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ವಾರ್ಡ್ನ ಸೌಲಭ್ಯವಿದೆ.
ಪ್ರಸ್ತುತ ವರ್ಷ ಏಪ್ರೀಲ್ ನಿಂದ ಅಕ್ಟೋಬರ್ ತಿಂಗಳವರೆಗೆ ತಪಾಸಣೆಯಾದ ಒಟ್ಟು ಕ್ಯಾನ್ಸರ್ ಪ್ರಕರಣಗಳು-96, ಕೀಮೋಥೆರಫಿ ಚಿಕಿತ್ಸೆಯಲ್ಲಿರುವ ಒಟ್ಟು ಪ್ರಕರಣ-45, ಬಾಯಿ ಕ್ಯಾನ್ಸರ್-14, ಗರ್ಭಕಂಠದ ಕ್ಯಾನ್ಸರ್-16, ಯಕೃತ್ ಕ್ಯಾನ್ಸರ್-2, ಅಂಡಾಶಯ ಕ್ಯಾನ್ಸರ್-4, ಶಾಸ್ವಕೋಶ ಕ್ಯಾನ್ಸರ್-1, ಸ್ತನ ಕ್ಯಾನ್ಸರ್-8 ಪ್ರಕರಣಗಳು ಕಂಡುಬAದಿವೆ ಎಂದು ಡಿಹೆಚ್‌ಓ ಮಾಹಿತಿ ನೀಡಿದ್ದಾರೆ.
ತಾಲ್ಲೂಕು ಮಟ್ಟದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಾರ್ವಜನಿಕರಿಗೆ ವಿವಿಧ ಹಂತಗಳಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಕುರಿತು ಮಾಹಿತಿ ಪಡೆದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article