ಭೂತಾನ್, ನವೆಂಬರ್ 11: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಈ ಪಿತೂರಿ ಹಿಂದೆ ಯಾರಿದ್ದರೋ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ದೆಹಲಿ ಸ್ಫೋಟದಲ್ಲಿ 8ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

