‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು

Ravi Talawar
‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು
WhatsApp Group Join Now
Telegram Group Join Now

ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

WhatsApp Group Join Now
Telegram Group Join Now
Share This Article