ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು

Ravi Talawar
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು
WhatsApp Group Join Now
Telegram Group Join Now

ನವದೆಹಲಿ, ನವೆಂಬರ್ 13: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ  ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ.

WhatsApp Group Join Now
Telegram Group Join Now
Share This Article