ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ. ಇದರಿಂದ ಭಯಗೊಂಡ ನಟಿ ನೂರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಂತೆ. ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.


