ಬೆಳಗಾವಿ: ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟಕ್ಕೆ ಅಭೂತಪೂರ್ವ ಗೆಲುವು ನೀಡಿದ ಬಿಹಾರದ ಜನತೆಗೆ ಧನ್ಯವಾದಗಳು
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ “ವೋಟ್ ಚೋರಿ” ನಾಟಕವನ್ನು ಹಾಗೂ ಅದರ ಮಿತ್ರಪಕ್ಷಗಳನ್ನು ಬಿಹಾರದ ಪ್ರಜ್ಞಾವಂತ ಮತದಾರರು ಸಾರಾಸಗಟಾಗಿ ತಿರಸ್ಕರಿಸುತ್ತಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಉತ್ತಮ ನಿರ್ಧಾರವಾಗಿದೆ.
ಕೆಲವೇ ತಿಂಗಳುಗಳ ಹಿಂದೆ ಹರ್ಯಾಣ, ಆ ನಂತರ ಮಹಾರಾಷ್ಟ್ರ, ಇದೀಗ ಬಿಹಾರದಲ್ಲಿ ಬಂದಿರುವ ಸ್ಪಷ್ಟ ಜನಾದೇಶವು ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಸಾಮಾನ್ಯರು ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಆಕ್ರೋಶಗೊಂಡಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


