ಆಂಧ್ರಪ್ರದೇಶದ ಪುಟ್ಟಪರ್ಥಿಯಲ್ಲಿ ಸತ್ಯ ಸಾಯಿಬಾಬ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್, ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಮೊದಲಾದವರು ಭಾಗಿ ಆಗಿದ್ದರು. ಬಾಲಿವುಡ್ ನಟಿ ಐಶ್ವರ್ಯಾ ರೈ ಕೂಡ ಈ ಸಂದರ್ಭದಲ್ಲಿ ವೇದಿಕೆ ಮೇಲೆ ಹಾಜರದ್ದರು. ಅವರು ಪ್ರಧಾನಿ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಪ್ರಧಾನಿ ಮೋದಿ ಬಗ್ಗೆ ಅವರು ಸಂತೋಷ ಹೊರಹಾಕಿದರು. ‘ಈ ವಿಶೇಷ ಸಂದರ್ಭದಲ್ಲಿ ಇಂದು ನಮ್ಮೊಂದಿಗೆ ಇದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿಮ್ಮ ಸ್ಫೂರ್ತಿದಾಯಕ ಮಾತುಗಳನ್ನು ಕೇಳಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಐಶ್ವರ್ಯಾ ಹೇಳಿದರು.


