ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 

Pratibha Boi
WhatsApp Group Join Now
Telegram Group Join Now
ಅಥಣಿ : ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಅಥಣಿ. ತಹಶೀಲ್ದಾರ ಕಚೇರಿ ಅಥಣಿ. ತಾಲೂಕಾ ಪಂಚಾಯತ ಕಛೇರಿ ಅಥಣಿ. ಪುರಸಭೆ ಅಥಣಿ. ಆಯಾ ಗ್ರಾಮ ಪಂಚಾಯತಗಳ ಹಾಗೂ ಸಂಬಂಧಪಟ್ಟ ಅಂಗನವಾಡಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸದರಿ ಆಯ್ಕೆ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ “ದಿನಾಂಕ: 29-11-2025 ರ ಸಂಜೆ 5-30 ಘಂಟೆಯೊಳಗಾಗಿ” ಪೂರಕ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ
ಎ.ಪಿ.ಎಮ್.ಸಿ ಯಾರ್ಡ ಸಿದ್ದೇಶ್ವರ ಗುಡಿ ಹತ್ತಿರ ಇಲ್ಲಿ ಸಲ್ಲಿಸಬಹುದಾಗಿದೆ. ತದನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಆಥಣಿ ದೂರವಾಣಿ ಸಂಖ್ಯೆ 08289-295150 ಇವರನ್ನು ರಜಾ ದಿನಗಳನ್ನು ಹೊರತುಪಡಿಸಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಮಂಜುನಾಥ ಬಿ ಸೌಂದಲಗೇಕರ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥಣಿ ಇವರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
WhatsApp Group Join Now
Telegram Group Join Now
Share This Article