ಬೆಳಗಾವಿ.ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ಇಂದು ಬೆಳಗಾವಿ ನಗರದ ಬಿಜೆಪಿ ಕಚೇರಿಯಲ್ಲಿ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ, ಭೀಮ ಸ್ಮೃತಿ ದಿನ ಹಾಗೂ ಸಂಘಟನಾ ಚಟುವಟಿಕೆಗಳ ಬಗ್ಗೆ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಮಾತನಾಡಿ ಆತ್ಮ ನಿರ್ಭರ ಭಾರತದ ಉದ್ದೇಶ ಸ್ವದೇಶಿ ಎನ್ನುವುದು ನಮ್ಮ ಜೀವನದ ಭಾಗವಾಗಬೇಕು. ನಾವು ಕೊಂಡುಕೊಳ್ಳುವ ವಸ್ತುಗಳಲ್ಲಿ ಶೇ.50%
ವಸ್ತುಗಳು ವಿದೇಶದಲ್ಲಿ ಉತ್ಪನ್ನವಾದಂತಹ ವಸ್ತುಗಳಾಗಿವೆ. ನಮ್ಮ ದೇಶದಲ್ಲಿ ತಯಾರಾದ “ಮೇಡ್ ಇನ್
ಇಂಡಿಯಾ” ವಸ್ತುಗಳು “ಮೇಕ್ ಇನ್ ಇಂಡಿಯಾ” ವಸ್ತುಗಳನ್ನು ಮಾತ್ರ ಕೊಂಡುಕೊಳ್ಳುವುದರ ಬಗ್ಗೆ
ಸ್ವದೇಶಿ ಜಾಗೃತಿಯನ್ನು ನಮ್ಮ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸುವ ಕಾರ್ಯ ಮಾಡಬೇಕೆಂದರು. ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಅವರು ಭೀಮ ಸ್ಮೃತಿ ಬಗ್ಗೆ ಮಾತನಾಡಿ
ನರೇಂದ್ರ ಮೋದಿಜೀ ಅವರು ಬಾಬಾಸಾಹೇಬರ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ 5
ಸ್ಥಳಗಳನ್ನು ಪಂಚತೀರ್ಥವನ್ನಾಗಿ ಅಭಿವೃದ್ಧಿಗೊಳಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಜನರ ಮಧ್ಯೆ ತೆಗೆದುಕೊಂಡು ಹೋಗುವ
ಪ್ರಾಮಾಣಿಕ ಕಳಕಳಿ ಇರುವುದು ಬಿಜೆಪಿಗೆ ಮಾತ್ರ ಎಂದರು.ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು
ಈ ಸಂದರ್ಭದಲ್ಲಿ ರಾಜ್ಯ ಎಸ್ .ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹುಂದ್ರಿ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಮಾದಮ್ಮನವರ್, ಧನುಶ್ರೀ ದೇಸಾಯಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೋಹಿತೆ,ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು


