ತೀರ್ಥರೂಪ ತಂದೆಯವರಿಗೆ ಸಿನಿಮಾದ    ನೀ ನನ್ನವಳೇ ಹಾಡು ಬಿಡುಗಡೆ

Ravi Talawar
ತೀರ್ಥರೂಪ ತಂದೆಯವರಿಗೆ ಸಿನಿಮಾದ    ನೀ ನನ್ನವಳೇ ಹಾಡು ಬಿಡುಗಡೆ
WhatsApp Group Join Now
Telegram Group Join Now
     ಅಪ್ಪಟ ಕನ್ನಡ ಟೈಟಲ್ ಹಾಗೂ ತಾರಾಬಳಗದ ಮೂಲಕ‌ ಕುತೂಹಲ ಹೆಚ್ಚಿಸಿರುವ ಸಿನಿಮಾ ‘ತೀರ್ಥರೂಪ ತಂದೆಯವರಿಗೆ’. ಈ ಹಿಂದೆ ಹೊಂದಿಸಿ ಬರೆಯರಿ ಕಥೆ ಹೇಳಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಎರಡನೇ ಪ್ರಯತ್ನ ಇದು. ಚಿತ್ರತಂಡ ಎರಡನೇ ಹಾಡನ್ನು ಅನಾವರಣ ಮಾಡಿದೆ.
     ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ನೀ ನನ್ನವಳೇ ಎಂಬ ಮೆಲೋಡಿ ಗೀತೆ ರಿಲೀಸ್ ಆಗಿದೆ. ಈಗಾಗಲೇ ತೀರ್ಥರೂಪ ತಂದೆಯವರಿಗೆ ಚಿತ್ರದ ನನದೇ ಜಗದಲಿ ಎಂಬ ಹಾಡು ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.
     ನೀ  ನನ್ನವಳೇ ಹಾಡಿಗೆ  ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ರಜತ್ ಹೆಗ್ಡೆ, ಈಶಾ ಸುಚಿ   ಧ್ವನಿಯಾಗಿದ್ದಾರೆ. ಜೋ‌ ಕೋಸ್ಟ್ ಸಂಗೀತ ನಿರ್ದೇಶನ ಮಾಡಿದ್ದಾರೆ. ‌ನಾಯಕ ನಿಹಾರ್ ಮುಖೇಶ್ ಹಾಗೂ ನಾಯಕಿ ರಚನಾ ಇಂದರ್ ಹಾಡಿನಲ್ಲಿ ಮಿಂಚಿದ್ದಾರೆ.
     ಚಿತ್ರದಲ್ಲಿ ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ, ಅಶ್ವಿತಾ ಹೆಗಡೆ ಸೇರಿದಂತೆ ಅನುಭವಿ ತಾರಾಬಳಗದವಿದೆ. ‘ತೀರ್ಥರೂಪ ತಂದೆಯವರಿಗೆ’ ಚಿತ್ರವು ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿದೆ.
     ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ.  ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಬ್ಲಿಂಕ್ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ  ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ದೀಪಕ್ ಯರಗೇರಾ  ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನವಿದೆ. ಪ್ರಶಾಂತ್ ರಾಜಪ್ಪ  ಸಂಭಾಷಣೆ ಬರೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ.
WhatsApp Group Join Now
Telegram Group Join Now
Share This Article