ಬಳ್ಳಾರಿ. ಡಿ. 05: 15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಾಗ್ರಿ ವೆಚ್ಚ ಬಿಡುಗಡೆ ಮಾಡಲು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಕಾಲಕ್ಕೆ ನಡೆಸುವಂತೆ ಆಗ್ರಹಿಸಲು ಹಾಗೂ ಆರ್ ಡಿ ಪಿ ಆರ್ ಕುಟುಂಬದ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆಯಲು ಇದೇ ಡಿಸೆಂಬರ್ 9 ನೇ ತಾರೀಖು ಮಂಗಳವಾರ “ಬೆಳಗಾವಿ ಚಲೋ ” ಹೋರಾಟವನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದ ಬಳಿ ಹಮ್ಮಿಕೊಳ್ಳಲಾಗಿದೆ. ದಯಮಾಡಿ ನಮ್ಮ ಬಳ್ಳಾರಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸಿ ಹೋರಾಟವನ್ನು ಯಶ್ವಸಿಗೊಳಿಬೇಕೆಂದು ಬಳ್ಳಾರಿಜಿಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ,ದ ಜಿಲ್ಲಾಧ್ಯಕ್ಷ ಬಾಣಾಪುರ ನಾಗರಾಜ ಗೌಡ ಕೋರಿದ್ದಾರೆ.


