ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ನಲ್ಲಿ ಬಳ್ಳಾರಿ ವಿವಿ ಯ ಲೊಕೇಶ್ ರಾಥೋಡ್ ಗೆ ಕಂಚಿನ ಪದಕ

Hasiru Kranti
ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ನಲ್ಲಿ ಬಳ್ಳಾರಿ ವಿವಿ ಯ ಲೊಕೇಶ್ ರಾಥೋಡ್ ಗೆ ಕಂಚಿನ ಪದಕ
WhatsApp Group Join Now
Telegram Group Join Now

ಬಳ್ಳಾರಿ,ಡಿ.05- ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 5 ರವರೆಗೆ ನಡೆದ 5ನೇ ಆವೃತ್ತಿಯ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಲೋಕೇಶ್ ರಾಥೋಡ್ (ಜಿ.ಬಿ.ಆರ್. ಕಾಲೇಜು ಹೂವಿನಹಡಗಲಿ) ಡೆಕಾಥ್ಲಾನ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನವನ್ನು ಪಡೆದಿದ್ದಾರೆ.
ಇವರ ಸಾಧನೆಗೆ ಮತ್ತು ತಂಡದ ವ್ಯವಸ್ಥಾಪಕ ಮಲ್ಲಿಕಾರ್ಜುನ.ವೈ ಮತ್ತು ತರಬೇತುದಾರ ಬಡೇಸಾಬ ಅವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
WhatsApp Group Join Now
Telegram Group Join Now
Share This Article