ಡಿಸಿಎಂ ಆಗಿ ಮುಂದುವರಿಯಲು ನನಗೆ ತೃಪ್ತಿ : ಡಿ.ಕೆ.ಶಿ.

Hasiru Kranti
ಡಿಸಿಎಂ ಆಗಿ ಮುಂದುವರಿಯಲು ನನಗೆ ತೃಪ್ತಿ : ಡಿ.ಕೆ.ಶಿ.
WhatsApp Group Join Now
Telegram Group Join Now

ನವದೆಹಲಿ ಡಿ., ೨೪- ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿರುವ ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಡಿ.ಕೆ.ಶಿವಕುಮಾರ ಮಾರ್ಮಿಕವಾಗಿ ನುಡಿಯುವ ಮೂಲಕ  ಅಚ್ಚರಿ ಮೂಡಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಊಹಾಪೋಹಗಳು ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಜೊತೆ ಸಭೆಯ ಬಗ್ಗೆಯೂ ಹೇಳಿಕೆ ನೀಡಿರುವ ಅವರು, ತಾವು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 1990ರ ದಶಕದಿಂದಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನೆನಪಿಸಿಕೊಂಡ ಅವರು ಪಕ್ಷದ ಕಾರ್ಯಕರ್ತನಾಗಿರಲು ಇಷ್ಟ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.

ಎರಡೂವರೆ ವರ್ಷದ ಫಾರ್ಮುಲಾ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಇದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಲಾಗದು” ಎಂದು ಡಿಕೆಶಿ ಹೇಳಿದ್ದಾರೆ. ಪೂರ್ಣ ಐದು ವರ್ಷ ನನಗೆ ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಪುನರುಚ್ಚರಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಮಧ್ಯೆ ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಪ್ರಿಯಾಂಕಾ ಗಾಂಧಿ ಅವರ ಏಕೈಕ ಧ್ಯೇಯ ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿ ಮಾಡುವುದು” ಎಂದು ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಮಾಡಿದರೂ ಅದನ್ನು ಸ್ವೀಕರಿಸುತ್ತೇನೆ. ನನ್ನ ನಾಯಕಿ ಎಐಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದರು.

WhatsApp Group Join Now
Telegram Group Join Now
Share This Article