ಇಂಡಿ: ವಿಜಯಪುರದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಇಂಡಿ ತಾಲೂಕಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಅಬುಶಾಮಾ ಹವಾಲ್ದಾರ,ಉಪಾಧ್ಯಕ್ಷ ಭೀರಪ್ಪ ಹೊಸೂರ, ಉಪಾಧ್ಯಕ್ಷ ಅರವಿಂದ ಖಡೆಖಡೆ, ಪ್ರಧಾನ ಕಾರ್ಯದರ್ಶಿ ರಾಜಕುಮಾರ ಚಾಬುಕಸವಾರ, ಕಾರ್ಯದರ್ಶಿ ಸಿದ್ದಯ್ಯ ಹಿರೇಮಠ, ಖಜಾಂಚಿ ಆನಂದ ಗಣಚಾರಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಮ್.ಬಿ. ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಕಾನಿ.ಪ. ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಕಾರ್ಯದರ್ಶಿ ಪುಂಡಳಲೀಕ ಬಾಳೋಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಹುಲ ಆಪ್ಟೆ, ಅವಿನಾಶ ಬಿದರಿ, ಪ್ರಕಾಶ ಬೆಣ್ಣೂರ, ಶಶಿಕಾಂತ ಮೆಂಡೆಗಾರ, ಬಸವರಾಜ ಉಳ್ಳಾಗಡ್ಡಿ, ಮೊಹ್ಮದಸಮೀರ್ ಇನಾಮದಾರ ವಿನೋದ ಸಾರವಾಡ, ಸದ್ದಾಮಹುಸೇನ ಜಮಾದಾರ ಸೇರಿದಂತೆ ಮತ್ತಿತರರು ಇದ್ದರು.


