ಬಳ್ಳಾರಿ: 26.ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಬಳ್ಳಾರಿ ತಾಲ್ಲೂಕಿನ ಅಮರಾಪುರ ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಲು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಕಕ್ಕ ಬೇವಿನಹಳ್ಳಿ ಪ್ರೌಢ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಅಮರಾಪುರ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 84ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೋಷಕರು ಮಾತನಾಡುತ್ತಾ, ಸದನದಲ್ಲಿ ಶಿಕ್ಷಣ ಸಚಿವರು ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಹೇಳಿದರೂ, ಒಳಗೊಳಗೆ ಸರ್ಕಾರಿ ಶಾಲೆಯನ್ನು ಮುಚ್ಚುವ ಸಂಚನ್ನು ಮಾಡುತ್ತಿದ್ದಾರೆ. ಲಿಖಿತ ಆದೇಶವನ್ನು ಹೊರಡಿಸಲಿ, ಸರ್ಕಾರ ಬಡ ಮಕ್ಕಳಿಂದ ಶಿಕ್ಷಣವನ್ನು ವಂಚಿಸುವ ಹುನ್ನಾರವನ್ನು ನಾವು ಒಪ್ಪುವುದಿಲ್ಲ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳು ನಮಗೆ ಬೇಡ
ನಮಗೆ ನಮ್ಮ ಮಕ್ಕಳ ಶಿಕ್ಷಣ ಮುಖ್ಯ,ನಮ್ಮೂರ ಶಾಲೆ ನಮ್ಮೂರಲ್ಲಿ ಇರಬೇಕು ಹೆಣ್ಣು ಮಕ್ಕಳನ್ನು ದೂರದ ಊರಿಗೆ ಕಳಿಸಲು ಸಾಧ್ಯವಾಗುವುದಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾಧ್ಯಕ್ಷ ಕೆ ಈರಣ್ಣ ಎಐಡಿಎಸ್ಓ ಸದಸ್ಯರಾದ ಕಾಂತೇಶ್, ತಿಪ್ಪೇಸ್ವಾಮಿ, ಮತ್ತು ಸರ್ಕಾರಿ ಶಾಲೆ ಉಳಿಸಿ ಸಮಿತಿಯ ಸದಸ್ಯರಾದ ಬಸವರಾಜ್, ವೈ ನಾಗರಾಜ್, ಮೇಟಿ ಸಾಹುಕಾರ್, ಸೋಮನಾಥ್ ಸುಂಕಪ್ಪ ಗ್ರಾಮಸ್ಥರು ಭಾಗವಹಿಸಿದ್ದರು ಹಾಗೂ150ಕ್ಕೂ ಹೆಚ್ಚು ಊರಿನ ಗ್ರಾಮಸ್ಥರು, ಯುವಕರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


