ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗಡೆ ಹಾಗೂ ಡಾ.ಹೇಮಾವತಿ ಹೆಗಡೆಯವರ ಕೃಪಾಶೀರ್ವಾದದೊಂದಿಗೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮೂಡಲಗಿ ರೂರಲ ವಲಯ ಹಾಗೂ ಶಿವಾಪೂರ ಗ್ರಾಮದ ಗಣ್ಯರ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರವೀಣ್ ಪಾಟೀಲ ಮಾತನಾಡಿ ಸಂಘದ ಜೊತೆಗೆ ಪ್ರಾಮಾಣಿಕವಾಗಿ ವ್ಯವಹರಿಸಿದರೆ ಮುಂದೆ ಹೆಚ್ಚಿನ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದರು.
ವೇದಿಕೆ ಮೇಲೆ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ ಅಡವಿಸಿದ್ಧರಾಮ ಶ್ರೀಗಳು ಹಳ್ಳಿಗಳು ಸುಧಾರಿಸಿ ಎಲ್ಲರ ಕ?ಕ್ಕೆ ಸ್ಪಂದನೆ ನೀಡುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲ ನೀಡಿ ಅನುಕೂಲ ಕಲ್ಪಿಸಿದೆ. ಸಾಮೂಹಿಕ ವರ ಮಹಾಲಕ್ಷ್ಮಿ ಪೂಜೆ ಮಾಡುವುದರಿಂದ ಪಾಪ ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು. ಅತಿಥಿಗಳಾಗಿ ಆಗಮಿಸಿದ್ದ ಜನ ಜಾಗೃತಿ ವೇದಿಕೆಯ ಉದಯಗೌಡ, ಸಮಾಜ ಸೇವಕ ಮುರಿಗೆಪ್ಪ ಮಾಲಗಾರ, ಗ್ರಾ.ಪಂ ಉಪಾಧ್ಯಕ್ಷ ಎಂ.ಎಂ ಜುಂಜರವಾಡ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಾಜು ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಮಹಿಳೆಯರಿಗೆ ಉಡಿ ತುಂಬಲಾಯಿತು ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು,
ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಅಧ್ಯಕ್ಷೇ ಯಮುನವ್ವ ಗಿಡ್ಡವ್ವಗೋಳ, ಅಶೋಕ್ ಗಾಣಿಗೇರ, ಯಮನಪ್ಪ ನೀಡೋಣಿ, ಅಡವಯ್ಯ ಹಿರೇಮಠ, ಕೌಸರ ಹಣಗಂಡಿ, ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಮತ್ತು ದೀರ್ಘಾವಧಿ ಮಹಿಳಾ ಸದಸ್ಯರನ್ನು ಸತ್ಕರಿಸಿ ಗೌರವಿಸಲಾಯಿತು. ಸ್ವಸಹಾಯ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಯೋಜನೆ ಅಧಿಕಾರಿ ವಿಜಯಲಕ್ಷ್ಮಿ ಮುರನಾಳ ನಿರೂಪಿಸಿ ಮೇಲ್ವಿಚಾರಕ ರವಿ ಜಾಡಗೋಪ ವಂದಿಸಿದರು.
ಪ್ರಾಮಾಣಿಕತೆಯಿಂದ ವ್ಯವಹರಿಸಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಲಾಭ ಪಡೆಯಿರಿ


