ಬೇಡಿಕೆಗೆ ತಕ್ಕಂತೆ ನಿಗಧಿತ ಸಮಯದಲ್ಲಿ ಉದ್ಯೋಗ ಖಾತ್ರಿ ಕೆಲಸ ಒದಗಿಸಿ : ಸಂಜೀವ ಜುನ್ನೂರ

Hasiru Kranti
ಬೇಡಿಕೆಗೆ ತಕ್ಕಂತೆ ನಿಗಧಿತ ಸಮಯದಲ್ಲಿ ಉದ್ಯೋಗ ಖಾತ್ರಿ ಕೆಲಸ ಒದಗಿಸಿ : ಸಂಜೀವ ಜುನ್ನೂರ
WhatsApp Group Join Now
Telegram Group Join Now

ಬೈಲಹೊಂಗಲ: ನಗರದ ತಾಪಂ ಕಾರ್ಯಾಲಯದಲ್ಲಿ ಬುಧವಾರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ ಅವರು, ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ನಿಗಧಿತ ಸಮಯದಲ್ಲಿ ಉದ್ಯೋಗ ಖಾತ್ರಿ ಕೆಲಸಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಇದಲ್ಲದೆ, ತೆರಿಗೆ ವಸೂಲಾತಿ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಿ, ಗ್ರಾಮೀಣ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸ್ಥಳೀಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮದ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಪಂ.ರಾಜ ನಿರ್ದೇಶಕ ಅಪ್ಪಯ್ಯಾ ಕಂಬಾರ, ಸಹಾಯಕ ನಿರ್ದೇಶಕ ರಾಜೇಂದ್ರ ಮೊರಬದ, ರಾಜಶೇಖರ ಕಡೆಮನಿ, ಪ್ರಶಾಂತ ಹಿರೇಮಠ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿಗಳು ಸೇರಿದಂತೆ ತಾಪಂ ಸಿಬ್ಬಂದಿ ಹಾಗೂ ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article