ಮೂಡಲಗಿ : ಪಟ್ಟಣದ ಪ್ರತಿಷ್ಠಿತ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸಂತೋಷ ಪಾರ್ಶಿ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಮಹಾದೇವ ಗೋಕಾಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಎಸ್.ಬಿ. ಬಿರಾದಾರಪಾಟೀಲ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಚುನಾವಣಾ ಪ್ರಕ್ರೀಯೆ ಸುಗಮವಾಗಿ ಸಾಗಲು ಸಹಕಾರ ನೀಡಿದರು.


