ಚೌಕಿದಾರ್ ರಿಲೀಸ್ ಡೇಟ್

Sandeep Malannavar
ಚೌಕಿದಾರ್ ರಿಲೀಸ್ ಡೇಟ್
WhatsApp Group Join Now
Telegram Group Join Now
ಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ಚೌಕಿದಾರ್’. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
     ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚೌಕಿದಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಇದೇ ತಿಂಗಳ 30ರಂದು ‘ಚೌಕಿದಾರ್’ ಸಿನಿಮಾ ತೆರೆಗೆ ಬರಲಿದೆ.
     ಪೃಥ್ವಿ ಅಂಬಾರ್ ನಾಯಕನಾಗಿ ಹಾಗೂ ಧನ್ಯ ರಾಮ್ ಕುಮಾರ್ ನಾಯಕಿಯಾಗಿ ನಟಿಸಿರುವ ‘ಚೌಕಿದಾರ್’ ಸಿನಿಮಾದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
     ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ,‌ ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
     ಫ್ಯಾಮಿಲಿ, ಅಪ್ಪ-ಮಗನ ಬಾಂಧವ್ಯದ ಕಥೆ ಹೊಂದಿರುವ ಈ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿಯು ಯು/ಎ ಸರ್ಟಿಫಿಕೇಟ್‌ ನೀಡಿದೆ. ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ.
WhatsApp Group Join Now
Telegram Group Join Now
Share This Article