ಫುಟ್ ಪಾತ್ ರಸ್ತೆಗಳ ಅತಿಕ್ರಮಣ ಕಾಲಮಿತಿಯೊಳಗೆ ತೆರವುಗೊಳಿಸಿ : ನಾಗೇಂದ್ರ ಪ್ರಸಾದ್.ಕೆ

Sandeep Malannavar
ಫುಟ್ ಪಾತ್ ರಸ್ತೆಗಳ ಅತಿಕ್ರಮಣ ಕಾಲಮಿತಿಯೊಳಗೆ ತೆರವುಗೊಳಿಸಿ : ನಾಗೇಂದ್ರ ಪ್ರಸಾದ್.ಕೆ
WhatsApp Group Join Now
Telegram Group Join Now
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ

ಬಳ್ಳಾರಿ,ಜ.14- ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ,  ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಹೊರಭಾಗದ ಸಾರ್ವಜನಿಕರು ಹೆಚ್ಚಾಗಿ ಬಳಸುವ ಸರ್ವೀಸ್ ರಸ್ತೆಗಳ ರಿಪೇರಿಯಾಗಬೇಕಿದೆ. ಅಗತ್ಯವಿರುವ ಕಡೆ ಗುರುತಿಸಿದಂತಹ ರಸ್ತೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೊಳ್ಳಬೇಕು ಎಂದು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ವಿವಿಧೆಡೆ ಬಸ್ ಬೇ ನಿರ್ಮಿಸಲು ಪೊಲೀಸ್ ಅಧಿಕಾರಿಗಳು ಕೋರಿದ್ದು, ಪಾಲಿಕೆ ಅಧಿಕಾರಿಗಳು ಸೂಕ್ತ ಸಮನ್ವಯದೊಂದಿಗೆ ಕ್ರಮ ವಹಿಸಬೇಕು. ಅದೇರೀತಿಯಾಗಿ ಜಿಲ್ಲೆಯಲ್ಲಿನ ಆಸ್ಪತ್ರೆ ಮತ್ತು ಶಾಲೆಗಳ ಮುಂಭಾಗ ವೇಗದ ಮಿತಿಯ ಅಧಿಸೂಚನೆ ಹೊರಡಿಸಲು ಮತ್ತು ವೇಗದ ಮಿತಿಯ ಬಗ್ಗೆ ಸೂಚನಾ ಫಲಕ ಅಳವಡಿಸಲು ಸ್ಥಳ ಗುರುತಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಳ್ಳಾರಿ ನಗರದಲ್ಲಿ ಅತಿಕ್ರಮಣ ಮಾಡಿರುವ ಫುಟ್ ಪಾತ್ ರಸ್ತೆಗಳನ್ನು ಒಂದು ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಸಿದರು.
ನಗರದಿಂದ ಹೊರ ಹೋಗುವ ಹಾಗೂ ಒಳ ಬರುವ ವಾಹನಗಳ ಮೇಲೆ ನಿಗಾವಹಿಸಬೇಕು. ನಗರದಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಅಂತಹ ವಾಹನಗಳು ಕಂಡುಬAದಲ್ಲಿ ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಟೋ ಚಾಲಕರು, ತಮಗೆ ಅನುಕೂಲವಾಗುವ ಕಡೆಗಳಲ್ಲಿ ತಾವೇ ಜಾಗ ಗುರುತಿಸಿಕೊಂಡು, ನಿಲ್ಲಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಆಟೋ ಚಾಲಕ ಸಂಘದವರೊAದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲೆಯಲ್ಲಿ ರಸ್ತೆ ಬದಿ ವಿದ್ಯುತ್ ಕಂಬ ಮತ್ತು ಗಿಡ ನೆಡುವ ಕಾರ್ಯಕ್ಕೆ ರಸ್ತೆ ಅಗೆಯುವ ಕಾರ್ಯಕ್ಕೆ ಕಡ್ಡಾಯವಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯಲೇಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಖಲೀಲ್ ಸಾಬ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article