ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟವು ಕೊಡಮಾಡುವ 2025-26ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ಇಲ್ಲಿನ ಯುವಕ ಅಪ್ಪುಗೌಡ ಪಾಟೀಲ ಅವರು ವಿಜಯಪುರ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜ.18ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪ್ಪುಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಡಾ|ಜಾನಪದ ಎಸ್.ಬಾಲಾಜಿ ಹಾಗೂ ಪ್ರಧಾನ ಕಾರ್ಯದರ್ಶಿ ಸುರೇಶ ರೈಸುಡಿಮುಳ್ಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


