ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ ಒಕ್ಕೂಟ ಮನವಿ

Sandeep Malannavar
ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ ಒಕ್ಕೂಟ ಮನವಿ
WhatsApp Group Join Now
Telegram Group Join Now
ಸರ್ಕಾರದೊಂದಿಗೆ ಚರ್ಚೆ ಮಾಡಿ ಸೂಕ್ತ ಕ್ರಮ: ಕೆವಿ ಪ್ರಭಾಕರ್ ಭರವಸೆ
ಬೆಂಗಳೂರು:.17.- ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಿಳಿಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಸಲ್ಲಿಸಿದ ಮನವಿ ಸ್ವೀಕರಿಸಿ ಈ ಭರವಸೆ ನೀಡಿದರು.
ಈ ಹಿಂದೆ ಶಾಲಾ ಕಾಲೇಜಿನಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಇದ್ದಂತೆ ಈಗಲೂ ಮುಂದುವರಿಸಲು ಸೂಕ್ತ ಕ್ರ ತೆಗೆದುಕೊಳ್ಳುವಂತೆ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದರು.
ಉತ್ತರ ಪ್ರದೇಶ ಸರ್ಕಾರವು, ಆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದಿಸುವ ಮತ್ತು ನೋಟೀಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡಿರುವಂತೆ ರಾಜ್ಯದಲ್ಲಿಯೂ ಮಾಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಈ ಹಿಂದೆಯೂ ಸರ್ಕಾರಕ್ಕೆ ಮನವಿ ಮಾಡಿತ್ತು.
ಪಠ್ಯ ಪುಸ್ತಕದಲ್ಲಿ ಪತ್ರಿಕೆಗಳ ವಿಷಯವನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಜ್ಞಾನದ ಹಸಿವನ್ನು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಬಗ್ಗೆ ತಜ್ಞರ ಜೊತೆಗೆ ಅಧ್ಯಯನ ಮಾಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿ ಮಾಡಿಕೊಳ್ಳಲಾಗಿದೆ.
WhatsApp Group Join Now
Telegram Group Join Now
Share This Article