ಅಥಣಿ : ಪಟ್ಟಣದ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬೀದಿ ಬದಿ ವ್ಯಾಪಾರಸ್ಥರೆಲ್ಲರೂ ಜಮಾವಣೆಗೊಂಡು ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಯುವ ನಾಯಕ ಚಿದಾನಂದ ಸವದಿ ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವ ನಾಯಕ ಚಿದಾನಂದ ಸವದಿ ಅವರು ಬೀದಿಬದಿ ವ್ಯಾಪಾರಿಗಳ ಸಂಕಷ್ಟ ಮತ್ತು ಅವರ ಕೊಡುಗೆಯನ್ನು ಸ್ಮರಿಸಿದರು. ಬೀದಿ ಬದಿ ವ್ಯಾಪಾರಿಗಳು ಸಮಾಜದ ದೇಶದ ಆರ್ಥಿಕ ವ್ಯವಸ್ಥೆಯ ಅವಿಭಾಜ್ಯ ಅಂಗ. ಕಠಿಣ ಪರಿಸ್ಥಿತಿಯಲ್ಲೂ ಪ್ರಾಮಾಣಿಕವಾಗಿ ದುಡಿಯುವ ಇವರ ಹಿತರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಮಾನತೆಯ ಆಶಯ ಹಾಗೂ ಡಾ. ಮನಮೋಹನ್ ಸಿಂಗ್ ಅವರು ಜಾರಿಗೆ ತಂದ ಆರ್ಥಿಕ ನೀತಿಗಳು ಇಂದು ಸಾಮಾನ್ಯ ವ್ಯಾಪಾರಿಗಳಿಗೂ ಶಕ್ತಿ ತುಂಬಿವೆ. ಅಥಣಿ ಪಟ್ಟಣದ ವ್ಯಾಪಾರಿಗಳ ಅಭಿವೃದ್ಧಿಗೆ ಹಾಗೂ ಅವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಾವು ಸದಾ ಸಿದ್ಧರಿದ್ದೇವೆ, ಎಂದು ಭರವಸೆ ನೀಡಿದರು.
ಇದೆ ವೇಳೆ ಬೀದಿಬದಿ ವ್ಯಾಪಾರಸ್ಥರನ್ನು ಮಾರಾಟದ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಆನಂತರ ಬೀದಿ ಬದಿ ವ್ಯಾಪಾರಸ್ಥರಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ ಮಹಾದೇವ ಹಳದಮಳ, ರಮೇಶ ಪವಾರ್, ಆಶಿಫ ತಾಂಬೊಳಿ, ಮಂಜು ಹೋಳಿಕಟ್ಟಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮನಸೂರ ಬಾಗವಾನ, ಮಾನಿಂಗ ಭಜಂತ್ರಿ. ಶ್ರೀನಿವಾಸ ಶೆಟ್ಟಿ, ಗುಲಾಬ್ ಘಟಕಾಂಬಳೆ, ಬಸವಂತ ಮಾಂಗ ಸೇರಿದಂತೆ ಸಂಘದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನೂರಾರು ವ್ಯಾಪಾರಸ್ಥರು ಉಪಸ್ಥಿತರಿದ್ದರು
“ಬೀದಿಬದಿ ವ್ಯಾಪಾರಿಗಳ ದಿನಾಚರಣೆ” ಬೀದಿ ಬದಿ ವ್ಯಾಪಾರಿಗಳ ಹಿತ ಕಾಪಾಡಲು ಬದ್ಧ : ಚಿದಾನಂದ ಸವದಿ.


