ಯೋಗ ಒತ್ತಡ ನಿರ್ವಹಣೆಗೆ ಸಹಕಾರಿ: ಪ್ರೊ.ತಿಪ್ಪೇರುದ್ರಪ್ಪ

Sandeep Malannavar
ಯೋಗ ಒತ್ತಡ ನಿರ್ವಹಣೆಗೆ ಸಹಕಾರಿ: ಪ್ರೊ.ತಿಪ್ಪೇರುದ್ರಪ್ಪ
WhatsApp Group Join Now
Telegram Group Join Now

ಬಳ್ಳಾರಿ,ಜ.22- ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಅವರು ಹೇಳಿದರು.
ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.
ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದÀರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್‌ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

WhatsApp Group Join Now
Telegram Group Join Now
Share This Article