ಮಧ್ಯಸ್ಥಿಕೆ ವಿಶೇಷ ಅಭಿಯಾನ ಕುರಿತು
ನೇರ ಪೋನ್-ಇನ್ ಜಾಗೃತಿ ಕಾರ್ಯಕ್ರಮ
ಬೆಳಗಾವಿ : ಕೆಎಲ್ಇ ವೇಣುಧ್ವನಿ ೯೦.೪ ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ ದಿನಾಂಕ ೨೭ನೆ ಜನವರಿ ೨೦೨೬ ರಂದು ಮಧ್ಯಸ್ಥಿಕೆ ವಿಶೇಷ ಅಭಿಯಾನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ೯೦ ದಿನಗಳ ಮಧ್ಯಸ್ಥಿಕೆ ವಿಶೇಷ ಅಭಿಯಾನವು ೨೦೨೬ರ ಜನವರಿ ೨ ರಂದು ಪ್ರಾರಂಭಗೊಂಡಿದ್ದು, ಇದರಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರ ಅಪಘಾತ, ಪರಿಹಾರ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಭೂಸ್ವಾಧಿನ ಪ್ರಕರಣಗಳು ಮತ್ತು ಮತ್ತಿತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಮಧ್ಯಸ್ಥಿಕೆ ವಿಶೇಷ ಅಭಿಯಾನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಜಾಗೃತಿ ಮೂಡಿಸಿದರು, ನುರಿತ ಮಧ್ಯಸ್ಥಿಕೆದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಕ್ಷಿಗಾರರಿಗೆ ಕಾನೂನಾತ್ಮಕ ಸಹಕಾರ ನೀಡುತ್ತಾರೆ ಎಂದು ತಿಳಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿ ರೇಡಿಯೋ ಕೇಂದ್ರದ ಕಾರ್ಯಕ್ರಮ ನಿರ್ವಾಕರಾದ ಮನಿಷಾ ಸಣೈಕ ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಿರ್ವಹಿಸಿದರು.
ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮಧ್ಯಸ್ಥಿಕೆ ವಿಶೇಷ ಅಭಿಯಾನದಲ್ಲಿ ಅವಕಾಶ ಕಲ್ಪಿಸಲಾಗಿದೆ : ನ್ಯಾ.ಸಂದೀಪ ಪಾಟೀಲ


