ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆ

Sandeep Malannavar
WhatsApp Group Join Now
Telegram Group Join Now

ಚನ್ನಮ್ಮನ ಕಿತ್ತೂರು: ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಈ ಕುರಿತು ತಹಶೀಲ್ದಾರರಾದ ಕಲಗೌಡ ಆರ್. ಪಾಟೀಲ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಫೆಬ್ರವರಿ 7 ರಂದು ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಸಭಾ ಭವನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ಚುನಾಯಿತ ಸದಸ್ಯರಿಗೆ ಮತ್ತು ಜನಪ್ರತಿನಿಧಿಗಳಿಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ.

ಈ ಬಾರಿಯ ಮೀಸಲಾತಿಯನ್ವಯ ಅಧ್ಯಕ್ಷ ಸ್ಥಾನವು “ಸಾಮಾನ್ಯ” ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನವು “ಹಿಂದುಳಿದ ಅ” ವರ್ಗಕ್ಕೆ ಮೀಸಲಾಗಿರಿಸಲಾಗಿದೆ. ಕಿತ್ತೂರು ತಹಶೀಲ್ದಾರರು ಈ ಚುನಾವಣೆಯ ಗೊತ್ತುಪಡಿಸಿದ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ.

ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.

WhatsApp Group Join Now
Telegram Group Join Now
Share This Article