ಆಧುನಿಕ ಯುಗದಲ್ಲಿರುವ ಯುವಪೀಳಿಗೆಗೆ ಕ್ರೀಡಾ ಸ್ಪೂರ್ತಿ ಅತ್ಯಗತ್ಯ ;  ಖಾತ್ಯಯಿನಿ  ಮರಿದೇವಯ್ಯ

Sandeep Malannavar
ಆಧುನಿಕ ಯುಗದಲ್ಲಿರುವ ಯುವಪೀಳಿಗೆಗೆ ಕ್ರೀಡಾ ಸ್ಪೂರ್ತಿ ಅತ್ಯಗತ್ಯ ;  ಖಾತ್ಯಯಿನಿ  ಮರಿದೇವಯ್ಯ
WhatsApp Group Join Now
Telegram Group Join Now
ಬಳ್ಳಾರಿ. ಫೇ. 04:  ಕಾತ್ಯಾಯಿನಿ ಎಂ. ಮರಿದೇವಯ್ಯರವರು ಪಠ್ಯೇತರ ಚಟುವಟಿಕೆಗಳಲ್ಲಿ ಕ್ರೀಡೆಯೂ ಒಂದಾಗಿದೆ. ವಿದ್ಯಾರ್ಥಿನಿಯರು ಇಂತಹ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸದಢತೆ, ಶಿಸ್ತು, ಏಕಾಗ್ರತೆ ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗುತ್ತವೆ ಎಂದು ತಮ್ಮ ಅಧ್ಯಕ್ಷತೆಯ ನುಡಿಗಳ ಮೂಲಕ ತಿಳಿಸಿದರು.
 ಅವರು ಇಂದು ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತರ್ ಮಹಾವಿದ್ಯಾಲಯದ ಕ್ರೀಡೆಯನ್ನು ಉದ್ಘಾಟಿಸಿ ಮಾತನಾಡಿದರು.
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಶಶಿಧರ ಕೆಲ್ಲೂರು ರವರು ವಿಶೇಷ ಆಹ್ವಾನಿತರಾಗಿ ಆಗಮಿಸಿ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇವರ ಸಹಯೋಗದೊಂದಿಗೆ ನಗರದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಅಂತರ್ ಮಹಾವಿದ್ಯಾಲಯಗಳ ಥ್ರೋ ಬಾಲ್ ಮತ್ತು ಗುಡ್ಡಗಾಡು ಓಟ ಸ್ಪರ್ಧೆಗಳನ್ನು ಉದ್ಘಾಟಿಸಿದರು. ಈ ಎರಡು ಸ್ಪರ್ಧೆಗಳಿಗೆ ಜ್ಞಾನದ ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದ ಆಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ  ಕಾತ್ಯಾಯಿನಿ ಎಂ. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ವಿಜಯಪುರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೇರೆ ಬೇರೆ ಕಾಲೇಜುಗಳಿಂದ ಸು. ೮೦ ವಿದ್ಯಾರ್ಥಿನಿಯರು ಎರಡು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೂಪಂ ಸತೀಶ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಜಿ. ಅಶೋಕ ರವರು ಎರಡು ದಿನಗಳವರೆಗೆ ನಡೆಯುವ ಸ್ಪರ್ಧೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
 ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಸದಸ್ಯರಾದ  ಕೋರಿ ವಿರೂಪಾಕ್ಷಪ್ಪ ರವರು ಆಟವನ್ನು ಶ್ರದ್ಧೆಯಿಂದ ಆಡುವುದೇ ಪ್ರತಿಯೊಬ್ಬ ಕ್ರೀಡಾಪಟುವಿನ ನಿಜವಾದ ಕಾಯಕ ಎಂದು ತಿಳಿಸಿ, ಸ್ಪರ್ಧಾಳುಗಳಿಗೆ ಶುಭವನ್ನು ಕೋರಿದರು.
ರಸಾಯನಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಪಿ.ಜೆ.ಬಿಂದು ರವರು ಅಥಿತಿಗಳನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಬಿ.ಎನ್ ಮಂಗಳ ರವರು ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸುವರ್ಣಮ್ಮ ಡಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ  ವಿಶ್ವವಿದ್ಯಾಲಯದ ಆಯ್ಕೆಯ ತಂಡದ ಸದಸ್ಯರಾಗಿ ಡಾ. ಪ್ರದೀಪ್ ಕುಮಾರ ರವರು, ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article