ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀಮತಿ ಶೈಲಾ ಕೆ ಡಿ ಆಯ್ಕೆ 

Hasiru Kranti
ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀಮತಿ ಶೈಲಾ ಕೆ ಡಿ ಆಯ್ಕೆ 
WhatsApp Group Join Now
Telegram Group Join Now

ಬೆಂಗಳೂರು, 17- ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ) ನೂತನ ರಾಜ್ಯಾಧ್ಯಕ್ಷರಾಗಿ ಶ್ರೀಮತಿ ಶೈಲಾ ಕೆ ಡಿ ಅವರನ್ನು ಇಂದು ನಡೆದ ರಾಜ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಇಂದಿನ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಉಪಾಧ್ಯಕ್ಷರಾದ ಶ್ರೀ ಜಿ ನೀಲಕಂಠ ಸ್ವಾಮಿಯವರು ಪ್ರೆಸ್ ಕ್ಲಬ್ ಆಪ್ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯಾಧ್ಯಕ್ಷರಾದ ಶ್ರೀಮತಿ ಶೈಲಾ ಕೆ ಡಿ ರವರನ್ನು ಪದಾಧಿಕಾರಿಗಳು ಅಭಿನಂದಿಸಿದರು. ನಂತರ ಶೈಲಾ ಕೆ ಡಿ ಮಾತನಾಡಿ ಮುನಿಸಿಪಲ್ ನೌಕರರ ಜ್ವಲಂತ ಸಮಸ್ಯೆಗಳನ್ನು ಅರಿತುಕೊಂಡು ಎಲ್ಲ ಸಮಸ್ಯೆಗಳಿಗೆ ಹಂತಹAತವಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡುವುದಾಗಿ ಪತ್ರಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article