ಬಳ್ಳಾರಿ,ಫೆ.18- ಹೆಚ್‌ಐವಿ ಪೀಡಿತ ವ್ಯಕ್ತಿಗಳೊಂದಿಗೆ ಮಾನವೀಯತೆಯಿಂದ ವರ್ತಿಸಿ ಅವರ ಮನೋಬಲವನ್ನು ಹೆಚ್ಚಿಸಬೇಕು ಎಂದು ಹೆಚ್‌ಐವಿ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಅವರು ಹೇಳಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಏಡ್ಸ್ ತಡೆ, ಹಾರೈಕೆ ಬೆಂಬಲ ಹಾಗೂ ಚಿಕಿತ್ಸೆ ಮತ್ತು ಸೇವೆಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.
ಏಡ್ಸ್ ಹರಡಲು ಪ್ರಮುಖ ಕಾರಣಗಳು ಮತ್ತು ಏಡ್ಸ್ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದಿನ ಯುವ ಪೀಳಿಗೆಯಾದ ವಿದ್ಯಾರ್ಥಿಗಳು ವಿಶೇಷ ಜಾಗೃತಿ ಹೊಂದಬೇಕು ಎಂದರು.

18 ವರ್ಷ ತುಂಬಿದವರು ರಕ್ತದಾನ ಮಾಡಿದರೆ ಅವರ ಆರೋಗ್ಯ ಅವರ ಆಯಸ್ಸು, ನೆನಪಿನ ಶಕ್ತಿ ವೃದ್ಧಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಆರೋಗ್ಯಕ್ಕೆ ಅನುಗುಣವಾಗಿ ರಕ್ತದಾನ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಇಸ್ಮಾಯಿಲ್ ಮಕಂದಾರ್, ಉಪನ್ಯಾಸಕರಾದ ಡಾ.ದಸ್ತಗಿರಿಸಾಬ್, ಬಸಪ್ಪ.ಕೆ., ಮಾರೆಪ್ಪ, ಡಾ.ಮಹಾಂತೇಶ್, ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.