ನವದೆಹಲಿ,ಏಪ್ರಿಲ್ 12 : ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿದ್ದು, ತೀರ್ಪನ್ನು ಇಲ್ಲಿನ ನ್ಯಾಯಾಲಯ ಶುಕ್ರವಾರ ಕಾಯ್ದಿರಿಸಿದೆ.