ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು – ಶೃತಿ ವೈದ್ಯ 

A B
By A B
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು – ಶೃತಿ ವೈದ್ಯ 
WhatsApp Group Join Now
Telegram Group Join Now
ಯರಗಟ್ಟಿ : ಆಧುನಿಕ ತಂತ್ರಜ್ಞಾನ ಯುಗದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಅವರ ಧರ್ಮಪತ್ನಿ ಶ್ರೀಮತಿ ಶೃತಿ ವಿಶ್ವಾಸ ವೈದ್ಯ ಅವರು ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಳ್ಳೆಯ ವಿದ್ಯಾಭ್ಯಾಸವು ಮಹಿಳಾ ಸಬಲೀಕರಣದ ಮೊದಲ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದರು.
ಸ್ಥಳೀಯ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಶ್ರೀಮತಿ ಆಶಾ ಪರೀಟ ಅವರು ಮಹಿಳಾ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆರ್. ಎಸ್. ಮರಿಗೌಡರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಜಯಲಕ್ಷ್ಮಿ ಬದ್ದಿ, ಡಾ. ಸುನಂದಾ ಮಾದರ, ಶಂಕರ ಲಗಳಿ, ಡಾ. ರಾಜಶೇಖರ ಬಿರಾದಾರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article