ತರ್ಕಬದ್ಧಗೊಳಿಸುವ ಹೆಸರಲ್ಲಿ ಆಶಾಗಳನ್ನು ಕೈಬಿಡುವ ನಿರ್ಧಾರ ವಿರೋಧಿಸಿ ಅನಿರ್ದಿಷ್ಟ ಪ್ರತಿಭಟನಾ ಧರಣಿ

MK HasiruKranti
ತರ್ಕಬದ್ಧಗೊಳಿಸುವ ಹೆಸರಲ್ಲಿ ಆಶಾಗಳನ್ನು ಕೈಬಿಡುವ ನಿರ್ಧಾರ ವಿರೋಧಿಸಿ ಅನಿರ್ದಿಷ್ಟ ಪ್ರತಿಭಟನಾ ಧರಣಿ
WhatsApp Group Join Now
Telegram Group Join Now
ಬಳ್ಳಾರಿ,ಮಾ.17..: ಎಐಯುಟಿಯುಸಿಗೆ ಸಂಯೋಜನೆಗೊAಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿAದ, ಆಶಾಗಳಿಗೆ ಜನಸಂಖ್ಯೆಯನ್ನು ತರ್ಕಬದ್ಧಗೊಳಿಸುವ ಹೆಸರಲ್ಲಿ ಸಾವಿರಾರು ಆಶಾಗಳನ್ನು ವಜಾಗೊಳಿಸುವ ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ, ಅನಿರ್ದಿಷ್ಟ ಪ್ರತಿಭಟನಾ ಧರಣಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿವಿಧ ತಾಲ್ಲೂಕಿನಿಂದ ನೂರಾರು ಸಂಖ್ಯೆಯಲ್ಲಿ ಆಶಾಗಳು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷಿö್ಮ ಮಾತನಾಡುತ್ತಾ “ಆರೋಗ್ಯ ಇಲಾಖೆಯ ಈ ನಿರ್ಧಾರವು ಆಶಾಗಳಿಗೆ ಘೋರ ಆಘಾತ ತಂದಿದೆ. ಇದೇ ವೃತ್ತಿಯನ್ನು ನಂಬಿರುವ ಆಶಾ ಮತ್ತವರ ಕುಟುಂಬಗಳು ಬೀದಿಗೆ ಬರುವ ಆತಂಕ ಎದುರಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ೨೦೦ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈ ಬಿಡುವ ಯೋಜನೆ ಈಗಾಗಲೆ ಸಿದ್ಧವಾಗಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ. ಈ ಕ್ರಮವು ಕೇಂದ್ರದ ಮಾರ್ಗಸೂಚಿಯ ಉಲ್ಲಂಘನೆ ಆಗಿರುತ್ತದೆ. ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಇಂತಹ ಕ್ರಮವನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದೆ. ಕೈಬಿಟ್ಟ ಆಶಾಗಳನ್ನು ನಿಯಮಾನುಸಾರ ‘ಡಿ’ ಗ್ರೂಪ್ ನೌಕರರನ್ನಾಗಿ ತೆಗೆದುಕೊಳ್ಳಲಾಗುವುದು ಎನ್ನುವುದು ಕೇವಲ ಬಾಯಿ ಮಾತಿನ ಹೇಳಿಕೆ ಅಷ್ಟೇ. ಸಾವಿರಾರು ಆಶಾಗಳನ್ನು ವಜಾಗೊಳಿಸುವುದು ಇದರ ಹಿಂದಿರುವ ಉದ್ದೇಶವಾಗಿದೆ. ಇಂತಹ ಸಂದರ್ಭದಲ್ಲಿ ಈ ನಿರ್ಧಾರ ಹಿಂಪಡೆಯುವವರೆಗೂ ಆಶಾಗಳು ಬಲಿಷ್ಠ ಚಳುವಳಿ ಬೆಳಸಬೇಕು” ಎಂದರು.
       ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಸಮಾಜದ ಆರೋಗ್ಯಕ್ಕಾಗಿ ಹಗಲಿರುಳು ಕಷ್ಟಪಡುತ್ತಿದ್ದರೂ, ಗೌರವ ಘನತೆಯಿಂದ ಬದುಕುವ ವೇತನದಿಂದ ಸಂಪೂಣವಾಗಿ ಕಡೆಗಣಿಸಲ್ಪಟ್ಟಿದ್ದಾರೆ.  ಇದಲ್ಲದೆ ಆರ್.ಸಿ.ಹೆಚ್ ಪೋರ್ಟಲ್‌ನ ಸಮಸ್ಯೆಯಿಂದಾಗಿ, ಅವರಿಗೆ ದುಡಿದಷ್ಟು ವೇತನ ಬರುತ್ತಿಲ್ಲ. ಹೋದ ವರ್ಷ ಜನವರಿಯಲ್ಲಿ ರಾಜ್ಯಮಟ್ಟದ ಹೋರಾಟದ ಸಂದರ್ಭದಲ್ಲಿ ಮಾನ್ಯ ಮುಖಮಂತ್ರಿಗಳು ಪ್ರತಿಯೊಬ್ಬ ಆಶಾಗೆ ಕನಿಷ್ಠ ರೂ.೧೦,೦೦೦ ಗ್ಯಾರೆಂಟಿ ಮಾಡುವ ಭರವಸೆ ನೀಡಿದ್ದರು. ಇಲ್ಲಿಯವರೆಗೂ ಈ ಭರವಸೆ ಈಡೇರಿಸಲಿಲ್ಲ. ಇದರ ಬದಲು ಮೌಲ್ಯಮಾಪನ, ತರ್ಕಬದ್ಧಗೊಳಿಸುವ ಹೆಸರಲ್ಲಿ ಜನ ಸಂಖ್ಯೆಯ ಮಿತಿಯನ್ನು ಹೆಚ್ಚಿಸಿ, ಆಶಾಗಳನ್ನು ಕೈಬಿಡಲು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಹೊರಟಿದೆ. ಇದು ಅತ್ಯಂತ ಅಮಾನವೀಯ ಕ್ರಮವಾಗಿದೆ. ಅಷ್ಟೇ ಅಲ್ಲದೆ ಆಶಾಗಳ ಹೋರಾಟವನ್ನು ಹತ್ತಿಕ್ಕುವ ಕ್ರಮವಾಗಿದೆ” ಎಂದರು.
     ಈ ಸಂದರ್ಭದಲ್ಲಿ ಆಶಾ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಎ.ಶಾಂತಾ, ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾದ ಎ.ದೇವದಾಸ್,  ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಮಾತನಾಡಿದರು. ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾ ಅಧ್ಯಕ್ಷರಾದ ಎಂ.ಗೀತಾ ವಹಿಸಿದ್ದರು . ಮುಖಂಡರಾದ ಸುರೇಶ್, ಮಾಣಿಕ್ಯಮ್ಮ, ರೇಷ್ಮಾ, ರಾಮಕ್ಕ, ಜಲಜಾಕ್ಷಿ, ಪಾವನಿ, ಈರಮ್ಮ, ಕವಿತಾ ಮುಂತಾದವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article