ಬಳ್ಳಾರಿ,ಮಾ.20
ಸಮಾಜಕ್ಕೆ ಶಾಪವಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಮತ್ತು ಅಂತಹ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕರಿಸುವಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಶಾರೀರಿಕ, ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿದೆ. ಬಡತನ ಹಾಗೂ ಅಜ್ಞಾನದ ಕಾರಣದಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದುಡಿಮೆಗೆ ಸೇರುತ್ತಿದ್ದಾರೆ. ಈ ಪಿಡುಗನ್ನು ಹೋಗಲಾಡಿಸಲು ಜಿಲ್ಲಾಡಳಿತವು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳು, ಪತ್ತೆ ಹಚ್ಚುವ ಕಾರ್ಯ ಮತ್ತು ಪುನರ್ವಸತಿ ಪ್ರಕ್ರಿಯೆಗಳನ್ನು ನಡೆಸುತ್ತಾ ಬಂದಿದೆ.
ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಮತ್ತು ಉತ್ತಮ ಜೀವನೋಪಾಯ ಕಲ್ಪಿಸಲು ಆರ್ಥಿಕ ನೆರವಿನ ಅಗತ್ಯವಿದೆ. ಈ ಸಾಮಾಜಿಕ ಕಾರ್ಯಕ್ಕೆ ಕೈಜೋಡಿಸಲು ಇಚ್ಛಿಸುವ ದಾನಿಗಳು, ಕೈಗಾರಿಕೋದ್ಯಮಿಗಳು ಮತ್ತು ಸಾರ್ವಜನಿಕರು ಈ ಕೆಳಗಿನ ಬ್ಯಾಂಕ್ ಖಾತೆಗೆ ದೇಣಿಗೆ ನೀಡಬಹುದಾಗಿದೆ.
ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ (Canara Bank)
ಖಾತೆ ಸಂಖ್ಯೆ: 110058103941
IFSC ಕೋಡ್: CNRB0007295
ಶಾಖೆ: ಬೆಂಗಳೂರು ವರ್ಕರ್ಸ್ ವೆಲ್ಫೇರ್ ಬೋರ್ಡ್ ಶಾಖೆ, ಬೆಂಗಳೂರು.
ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಅವರ ಸುಂದರ ಭವಿಷ್ಯಕ್ಕಾಗಿ ಉದಾರವಾಗಿ ಧನಸಹಾಯ ಮಾಡುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕೋರಿದ್ದಾರೆ.


