೩ ದಿನದೊಳಗೆ ಜಂಟಿ ಸಮೀಕ್ಷೆ  ನಡೆಸಿ ವರದಿ ಸಲ್ಲಿಸಲು  ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ಜಿಲ್ಲೆಯಲ್ಲಿ ಬಿರುಗಾಳಿ, ಆಲಿಕಲ್ಲು ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆ ಹಾನಿ

MK HasiruKranti
೩ ದಿನದೊಳಗೆ ಜಂಟಿ ಸಮೀಕ್ಷೆ  ನಡೆಸಿ ವರದಿ ಸಲ್ಲಿಸಲು  ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ಜಿಲ್ಲೆಯಲ್ಲಿ ಬಿರುಗಾಳಿ, ಆಲಿಕಲ್ಲು ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆ ಹಾನಿ
WhatsApp Group Join Now
Telegram Group Join Now
ವಿಜಯಪುರ, ಮಾರ್ಚ್.೨೩ (ಕರ್ನಾಟಕ ವಾರ್ತೆ): ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು ೩ ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ ೩ ದಿನಗೊಳಗಾಗಿ (ಮುಂದಿನ ೭೨ ಗಂಟೆಗೂಳಗಾಗಿ) ಓರಿಯಂಟಲ್ ಜನರಲ್ ಇನ್ಸೂರನ್ಸ್ ಕಂಪನಿ ಖಿoಟಟ ಈಡಿee ಓumbeಡಿ ೧೮೦೦ ೪೨೫ ೬೬೭೮ ಗೆ ಕರೆ ಮಾಡಿ ವೈಯಕ್ತಿಕ ಸ್ಥಳ ನಿರ್ದಿ? ವಿಕೋಪಗಳ (Iಐಐಂ) ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
೨೦೨೫-೨೬ ನೇ ಸಾಲಿನ ಖWಃಅIS ಯೋಜನೆಯಡಿ ದ್ರಾಕ್ಷಿ, ದಾಳಿಂಬೆ ಹಾಗೂ ಲಿಂಬೆ ಬೆಳೆಗಳಿಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದಲ್ಲಿ, ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾಗೂ ಮಾಹಿತಿಯನ್ನು ೭೨ ಗಂಟೆಗಳೊಳಗಾಗಿ ಅಗ್ರಿಕಲ್ಟರ್ ಇನ್ಸುರನ್ಸ್ ಕಂಪನಿ ಆಪ್ ಇಂಡಿಯಾ ಲಿ. ರವರಿಗೆ ಖಿoಟಟ ಈಡಿee ಓumbeಡಿ ೧೮೦೦ ೪೨೫ ೦೫೦೫ ಗೆ ಕರೆ ಮಾಡಿ ರೈತರು ಮಾಹಿತಿ ನೀಡಬಹುದಾಗಿದೆ ಎಂದರು.
ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು ೩ ದಿನಗಳೊಳಗಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
WhatsApp Group Join Now
Telegram Group Join Now
Share This Article