ಬಳ್ಳಾರಿ, ಮಾ.24:ನಗರದ ಖ್ಯಾತ ಲೆಕ್ಕಪರಿಶೋಧಕ ಸಿರಿಗೇರಿ ಪನ್ನರಾಜ್ ಅವರನ್ನು ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆಯ ಕಾರ್ಪೊರೇಟ್ ಮಿತ್ರ ಕಮಿಟಿಗೆ 2026-27 ನೇ ಸಾಲಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ .
ಸೂಕ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಕ್ಷೇತ್ರದಲ್ಲಿನ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.
2030 ರ ವೇಳೆಗೆ ಸೂಕ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯನ್ನು ಒಂದು ಪ್ರಮುಖ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪನ್ನರಾಜ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.
ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ, ದಕ್ಷಿಣ ಭಾರತ ಪ್ರಾಂತೀಯ ಅಧ್ಯಕ್ಷರಾಗಿ ಸೇವೆಸಲ್ಲಿರುವ ತಮಗೆ ಈ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪನ್ನರಜ್ ಅವರು ಬರ೭ವ ಒಂದು ವರ್ಷದಲ್ಲಿ ಈ ಲ್ಷೇತ್ರದಲ್ಲಿ ಗಮನಾರ್ಹ ಕೆಲಸ ಮಾಡಲು ಶ್ರಮಿಸುವುದಾಗಿ ಹೇಳಿದ್ದಾರೆ.


