ಬಳ್ಳಾರಿ,ಮಾ.25.. ಭಾರತೀಯ ಸಂಸ್ಕೃತಿಯಲ್ಲಿ ಹಿಂದಿನಿAದಲೂ ಮಹಿಳೆಯರಿಗೆ ಪೂಜನೀಯ ಸ್ಥಾನವಿದೆ ಎಂದು ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರö್ಯ ಪೂರ್ವದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ್ದ ತುಳುನಾಡಿನ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಝಾನ್ಸಿ ರಾಣಿ ಲಕ್ಷಿö್ಮಬಾಯಿ ಅಂತಹ ವೀರ ಮಹಿಳೆಯರ ಧೈರ್ಯದ ಕಥೆಗಳನ್ನು ಸ್ಮರಿಸಬೇಕು. ಮಹಿಳೆಯರು ಮತ್ತು ದಲಿತರಿಗೆ ಶಿಕ್ಷಣ ನಿರಾಕರಿಸಲ್ಪಟ್ಟ ಕಾಲದಲ್ಲಿ, ಪುಣೆಯಲ್ಲಿ ಮೊದಲ ಬಾರಿಗೆ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆಯನ್ನು ಇಂದು ನಾವೆಲ್ಲರೂ ಗೌರವಿಸಬೇಕು ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಒದಗಿಸಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಸ್ವಾತಂತ್ರö್ಯ ನೀಡಲು ಅಂಬೇಡ್ಕರ್ ಅವರು ಮಂಡಿಸಿದ ಹಿಂದೂ ಕೋಡ್ ಬಿಲ್ ಮಸೂದೆ ತಿರಸ್ಕಾರಗೊಂಡಾಗ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು ಎಂದು ಸ್ಮರಿಸಿದರು.
1910 ರಲ್ಲಿ ಡೆನ್ಮಾರ್ಕ್ ನಲ್ಲಿ ಕ್ಲಾರಾ ಜೆಟ್ಕಿನ್ ಅವರು ಮಹಿಳಾ ಹಕ್ಕುಗಳಿಗಾಗಿ ಆರಂಭಿಸಿದ ಹೋರಾಟದ ಫಲವಾಗಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂತು. 1975 ರಲ್ಲಿ ಭಾರತದಲ್ಲಿ ಆಚರಿಸಲಾಯಿತು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿದ್ದು, ಈ ಕಾರ್ಯಕ್ರಮಗಳಿಗೆ ಹಲವು ಗಣ್ಯರಿಂದ ಶ್ಲಾಘನೆಗಳ ಮಹಾಪೂರವೇ ಹರಿದುಬಂದಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಈ ವರ್ಷದ ಮಹಿಳಾ ದಿನಾಚರಣೆಯನ್ನು ‘ಗಿವ್ ಟು ಗೇನ್’ (ಪಡೆಯುವುದಕ್ಕಾಗಿ ಕೊಡಿ) ಎಂಬ ವಿಶೇಷ ಥೀಮ್ನೊಂದಿಗೆ ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಅವಕಾಶ ಮತ್ತು ಸಮಯ ನೀಡಿದರೆ, ಅದು ಸಮೃದ್ಧ ಸಮಾಜವಾಗಿ ನಮಗೆ ಮರಳಿ ಸಿಗುತ್ತದೆ ಎಂಬುದು ಇದರ ಆಶಯ ಎಂದು ತಿಳಿಸಿಕೊಟ್ಟರು.
ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗುತ್ತಿದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಅರ್ಜಿಗಾಗಿ ಕಾಯುವ ಬದಲು ಅಧಿಕಾರಿಗಳೆ ಚುರುಕಾಗಿ ಕಾರ್ಯನಿರ್ವಹಿಸಿ ಮಹಿಳೆಯರು ಮತ್ತು ವಿಶೇಷ ಚೇತನರಿದ್ದ ಸ್ಥಳಕ್ಕೆ ಹೋಗಿ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಮಹಿಳೆಯರು ಕೇವಲ ಫಲಾನುಭವಿಗಳಾಗದೆ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನೇತೃತ್ವದ ಸ್ಥಾನಗಳನ್ನು ಅಲಂಕರಿಸುವ ಮೂಲಕ ಸಮಾಜವನ್ನು ಮುನ್ನಡೆಸುವಂತವರಾಗಬೇಕು ಎಂದು ಹೇಳಿದರು.
ಒಬ್ಬ ಹುಡುಗನಿಗೆ ಶಿಕ್ಷಣ ನೀಡಿದರೆ ಅದು ಅವನಿಗೆ ಮಾತ್ರ ಸೀಮಿತ, ಆದರೆ ಒಬ್ಬ ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಅದು ಇಡೀ ಕುಟುಂಬ ಮತ್ತು ಸಮಾಜಕ್ಕೆ ನೀಡಿದಂತೆ ಎಂಬ ಪ್ರಸಿದ್ಧ ಮಾತಿನಂತೆ, ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಶಿಕ್ಷಣದ ಕೊರತೆ ಮತ್ತು ಶಾಲೆ ಬಿಡುವ ಪ್ರಮಾಣ ಹೆಚ್ಚಾದಾಗ ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚುತ್ತವೆ. ಇದನ್ನು ತಡೆಯಲು ಹೆಣ್ಣು ಮಕ್ಕಳಿಗೆ ಕನಿಷ್ಠ ಪದವಿ ಅಥವಾ ಅವರ ಆಸಕ್ತಿಗೆ ಅನುಗುಣವಾಗಿ ಉನ್ನತ ಶಿಕ್ಷಣ ನೀಡಲು ಪೋಷಕರು ಪ್ರೋತ್ಸಾಹಿಸಬೇಕು. ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಿದರೆ ಮಾತ್ರ ದೇಶವು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಮಹಿಳೆಯರಲ್ಲಿರುವ ಸೌಮ್ಯತೆ, ಧೈರ್ಯ, ಪ್ರೀತಿ ಮತ್ತು ವಿಶ್ವಾಸ ಇಡೀ ಜಗತ್ತನ್ನೇ ಗೆಲ್ಲುವ ಶಕ್ತಿ ಹೊಂದಿದೆ. ಇಂದು ಪುರುಷರು ಪಡೆಯುತ್ತಿರುವ ಸ್ಥಾನಮಾನ, ಗೌರವ ಮತ್ತು ಅಧಿಕಾರದ ಹಿಂದೆ ತಾಯಿ ಮತ್ತು ಪತ್ನಿಯ ಸಹಕಾರ ಅಡಗಿದೆ. ಒಂದು ರಾಜ್ಯ, ಗ್ರಾಮ, ಶಾಲೆ ಅಥವಾ ದೇಶದಲ್ಲಿ ನಿಜವಾದ ಬದಲಾವಣೆ ಆಗಬೇಕಾದರೆ ಅದು ಮಹಿಳೆಯರಿಂದ ಮಾತ್ರ ಸಾಧ್ಯ. ಅವರು ಮನಸ್ಸು ಮಾಡಿದರೆ ಯಾವುದೇ ಬದಲಾವಣೆ ಅಸಾಧ್ಯವಲ್ಲ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ನಮ್ಮನ್ನು ಸಾಕಿ ಬೆಳೆಸಿದ ತಾಯಂದಿರ ಋಣ ತೀರಿಸುವುದು ಅಸಾಧ್ಯ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಪ್ರತಿಯೊಬ್ಬ ಮಹಿಳೆಯ ಬದುಕಿನಲ್ಲಿ ಹೊಸ ಸಂಚಲನ ಮೂಡಿಸಿವೆ. ಅವರ ಆರ್ಥಿಕ ಸ್ವಾತಂತ್ರö್ಯಕ್ಕಾಗಿ ಸಿದ್ದರಾಮಯ್ಯನವರ ಸರ್ಕಾರ ಈ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಕುರುಗೋಡು ತಾಪಂ ಇಓ ಕೆ.ವಿ ನಿರ್ಮಲಾ, ಜಿಪಂ ಲೆಕ್ಕಾಧಿಕಾರಿ ನಾಗಲಕ್ಷಿö್ಮ, ಡಿವೈಎಸ್ಪಿ ಗೋವಿಂದರಾಜ್, ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರು, ಸ್ವ- ಸಹಾಯ ಸಂಘದ ಮಹಿಳೆಯರು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು