ರಾಮಾಪುರ ಬಳಿ ಅರಣ್ಯದಲ್ಲಿ ಕಾರಿನಲ್ಲಿ ಓರ್ವ ವ್ಯಕ್ತಿಯನ್ನು ಬೆಂಕಿ ಹಚ್ಚಿ ಸುಟ್ಟ ಘಟನೆ 

MK HasiruKranti
ರಾಮಾಪುರ ಬಳಿ ಅರಣ್ಯದಲ್ಲಿ ಕಾರಿನಲ್ಲಿ ಓರ್ವ ವ್ಯಕ್ತಿಯನ್ನು ಬೆಂಕಿ ಹಚ್ಚಿ ಸುಟ್ಟ ಘಟನೆ 
WhatsApp Group Join Now
Telegram Group Join Now
ಧಾರವಾಡ: ತಾಲೂಕಿನ ರಾಮಾಪೂರ ಹದ್ದಿನಲ್ಲಿ ನಾಗಲಾವಿ ರೈಲು ನಿಲ್ದಾಣದ ಬಳಿ ಕಾರು ಸಹಿತ ಓರ್ವನನ್ನು ಬೆಂಕಿ ಹಚ್ಚಿ ಸುಟ್ಟ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಗ್ರಾಮೀಣ ಸಿಪಿಐ ಶಿವಾನಂದ ಕಮತಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕಾರು ಮತ್ತು ಕಾರಿನಲ್ಲಿ ಇದ್ದವರ ಕುರಿತು ಮಾಹಿತಿ ತಿಳಿದಿಲ್ಲ, ತನಿಖೆಯಿಂದ ಸತ್ಯಾಂಶ ಹೊರ ಬರಬೇಕಿದೆ.

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ಸಮೀಪವಿರುವ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಹಾಗೂ ನಿರ್ಜನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಕಾರೊಂದು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದಾಗ, ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.

​ಮೃತ ವ್ಯಕ್ತಿ ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದ ನಿವಾಸಿ ರಾಜು ಬೋಳಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರರಾಗಿದ್ದಾರೆ. ರಾಜು ಅವರು ತಮಗೆ ಸೇರಿದ ಕಾರಿನಲ್ಲಿಯೇ ಸುಟ್ಟು ಹೋಗಿದ್ದು, ದೇಹವನ್ನು ಗುರುತಿಸಲಾಗದಷ್ಟು ಬೆಂಕಿ ಆಹುತಿ ತೆಗೆದುಕೊಂಡಿದೆ.

​ಘಟನಾ ಸ್ಥಳವು ಅತ್ಯಂತ ನಿರ್ಜನ ಪ್ರದೇಶವಾಗಿದ್ದು, ದುಷ್ಕರ್ಮಿಗಳು ರಾಜು ಅವರನ್ನು ಇಲ್ಲಿಗೆ ಕರೆತಂದು ಅಥವಾ ಅಪಹರಿಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಹತ್ಯೆಯ ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಕಾರಿನಲ್ಲೇ ಇರಿಸಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಸಾಧ್ಯತೆ ದಟ್ಟವಾಗಿದೆ.

​ವಿಷಯ ತಿಳಿಯುತ್ತಿದ್ದಂತೆಯೇ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ (FSL) ಮತ್ತು ಶ್ವಾನದಳವನ್ನು ಕರೆಯಿಸಿಕೊಳ್ಳಲಾಗಿದ್ದು, ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

WhatsApp Group Join Now
Telegram Group Join Now
Share This Article