ಮಾ.31ರಂದು ಭರವಸೆ ಬೆಳಕು ಫೌಂಡೇಶನ್ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

MK HasiruKranti
ಮಾ.31ರಂದು ಭರವಸೆ ಬೆಳಕು ಫೌಂಡೇಶನ್ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ
WhatsApp Group Join Now
Telegram Group Join Now
ಅಥಣಿ: ಭರವಸೆ ಬೆಳಕು ಫೌಂಡೇಶನ್ ವತಿಯಿಂದ ದ್ವಿತೀಯ ವರ್ಷದ ವಾರ್ಷಿಕೋತ್ಸವ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಗಚ್ಚಿನ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷೆ ರೂಪಾ ಕಾಂಬಳೆ ತಿಳಿಸಿದರು.
ಅವರು ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ನೆರವೇರಿಸಲಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಹಾಗೂ ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಂತರ ಕರುನಾಡ ಕಾರ್ಮಿಕ ವೇದಿಕೆ ಜಿಲ್ಲಾ ಅಧ್ಯಕ್ಷೆ ರಾಣಿ ಬಡಿಗೇರ್ ಮಾತನಾಡಿ, “ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮೊದಲ ಬಾರಿಗೆ ಅಥಣಿಗೆ ಆಗಮಿಸುತ್ತಿದ್ದಾರೆ. ಮಹಿಳೆಯರು ಬೆಂಗಳೂರಿಗೆ ಹೋಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದು ಕಷ್ಟಸಾಧ್ಯ. ಹೀಗಾಗಿ, ಅಥಣಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿ, ತಮ್ಮ ಕುಂದುಕೊರತೆಗಳನ್ನು ನೇರವಾಗಿ ಅವರ ಗಮನಕ್ಕೆ ತಂದು ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಇದೊಂದು ಉತ್ತಮ ಅವಕಾಶ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸವಿತಾ ಕಾಂಬಳೆ, ಗೀತಾ ಮಡ್ಡಿ, ವೈಶಾಲಿ ಮೇಲ್ಗಡೆ, ಕಾದಂಬರಿ ಅಕ್ಕೋಳ, ಹಣಮಂತ ಕುರಬರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article