ಬಳ್ಳಾರಿ: 30..ಶ್ರೀ ವೀರಭದ್ರೇಶ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ವಿಶ್ವರಂಗ ಭೂಮಿ ದಿನಾಚರಣೆ ಅಂಗವಾಗಿ ಬಂಡಿಹಟ್ಟಿಯ ಶ್ರೀ ಗಿರಿಜಪ್ಪ ಅವಧೂತರ ಮಠದ ಆವರಣದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮಠದ ಮುಖಂಡರಾದ ನರಸಪ್ಪ ಅವರು ಮಾತನಾಡಿ, ಕಲೆ ಮತ್ತು ಕಲಾವದರನ್ನು ಗೌರವಿಸುವ ಮೂಲಕ ಕಲಾಭಿಮಾನಿಗಳು ಕಲೆಗೆ ಪ್ರೋತ್ಸಾಹ ನೀಡಬೇಕು. ಕಲಾಭಿಮಾನಿಗಳ ಪ್ರೋತ್ಸಾಹ ಮತ್ತು ಸಹಕಾರದಿಂದ ಕಲೆ ಜೀವಂತವಾಗಿ ಉಳಿಯಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಪ್ತಸ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ನ ಉಪಾಧ್ಯಕ್ಷೆ ಜಯಲಕ್ಷ್ಮೀ ಅವರು ಮಾತನಾಡಿ, ಕಲೆಗಳನ್ನು ಪ್ರದರ್ಶಿಸುವ ಮೂಲಕ ಕಲಾ ಟ್ರಸ್ಟ್ ಗಳು ಮತ್ರು ಕಲಾವಿದರು ಇನ್ನೂ ಎತ್ತರಕ್ಲೆ ಬೆಳೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮಠದ ಮುಖಂಡರಾದ ಬಸಪ್ಪ, ಕಸ್ತೂರಮ್ಮ ಮಾರುತಿ, ಸುಲೋಚನಮ್ಮ, ಸಪ್ತಸ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ನ ಅಧ್ಯಕ್ಷ ಹನುಮಾವಧೂತಪ್ಪ, ಶ್ರೀ ವೀರಭದ್ರೇಶ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ಅಧ್ಯಕ್ಷ ವೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿಜಯ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.


