ತಂತ್ರಜ್ಞಾನ ಯುಗದಲ್ಲಿ ಪದವಿ ಸಾಲದು ಕೌಶಲ್ಯಾಧಾರಿತ ಶಿಕ್ಷಣ ಅಗತ್ಯ :  ಡಾ. ಅನುರಾಧಾ ಎಸ್.ಜಿ

MK HasiruKranti
ತಂತ್ರಜ್ಞಾನ ಯುಗದಲ್ಲಿ ಪದವಿ ಸಾಲದು ಕೌಶಲ್ಯಾಧಾರಿತ ಶಿಕ್ಷಣ ಅಗತ್ಯ :  ಡಾ. ಅನುರಾಧಾ ಎಸ್.ಜಿ
WhatsApp Group Join Now
Telegram Group Join Now
ಬಳ್ಳಾರಿ/ಬೆಳಗಾವಿ, ಮಾರ್ಚ್ 30.. ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕೇವಲ ಪದವಿ ಸಾಕಾಗುವುದಿಲ್ಲ, ಕೌಶಲ್ಯಾಧಾರಿತ ಶಿಕ್ಷಣವೇ ಇಂದಿನ ಅಗತ್ಯವಾಗಿದೆ ಎಂದು ಬಳ್ಳಾರಿಯ ಶ್ರೀ ನಂದಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಅನುರಾಧಾ ಎಸ್.ಜಿ. ಅಭಿಪ್ರಾಯಪಟ್ಟರು.
 ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಸಂವೇದ  ವಿಟಿಯು ಹಳೆಯ ವಿದ್ಯಾರ್ಥಿಗಳ ಸಂಘದಿಂದ  ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ  ಮಾತನಾಡಿ, ಹಳೆಯ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು ಎಂದು ಅವರು ಕರೆ ನೀಡಿದರು.
 ಈ ಸಂದರ್ಭದಲ್ಲಿ ಡಾಕ್ಟರ್ ಅನುರಾಧ ಅವರನ್ನು ಸನ್ಮಾನಿಸಿ, ಡಾ. ಅನುರಾಧಾ ಎಸ್.ಜಿ. ಅವರು ಕಳೆದ 18 ವರ್ಷಗಳಿಂದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೃತಕ ಬುದ್ಧಿಮತ್ತೆ (AI), ಮೆಷಿನ್ ಲರ್ನಿಂಗ್ (ML) ಹಾಗೂ ಇಮೇಜ್ ಪ್ರೊಸೆಸಿಂಗ್ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರು 150ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದು, 10ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ. AI ಆಧಾರಿತ ವಾಯ್ಸ್ ಇಂಟರಾಕ್ಟಿವ್ ಸಾಧನವನ್ನು ಅಭಿವೃದ್ಧಿಪಡಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೇಟೆಂಟ್ ಪಡೆದಿದ್ದಾರೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ಸಂಶೋಧನಾ ಅನುದಾನವೂ ಪಡೆದಿದ್ದಾರೆ, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡವರು
ಪ್ರಸ್ತುತ ಅವರು ಬಳ್ಳಾರಿಯ ಅಕ್ಷರ ಗ್ಲೋಬಲ್ ಶಾಲೆ ಹಾಗೂ ಪಿಯು ಕಾಲೇಜಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಶ್ರೀ ನಂದಿ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದರು. ಸದ್ಯ ಅವರು
ಅಕ್ಷರ ಗ್ಲೋಬಲ್ ಶಾಲೆಯ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವ ಅವರು, 2026-27ರವರೆಗೆ ₹1.1 ಕೋಟಿಗೂ ಅಧಿಕ ವಿದ್ಯಾರ್ಥಿ ವೇತನವನ್ನು ವಿತರಿಸಿದ್ದಾರೆ. ಅವರ ಈ ಸಾಧನೆಗಾಗಿ ‘ಬೆಸ್ಟ್ ಟೀಚರ್ ಅವಾರ್ಡ್’, ‘ಬೆಸ್ಟ್ ಪೇಪರ್ ಪ್ರೆಸೆಂಟರ್’ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ ಎಂದು ಅವರ ಸೇವೆಯನ್ನು ಕೊಂಡಾಡಿದರು.
 ಈ ಸಂದರ್ಭದಲ್ಲಿ  ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್ ಎಸ್., ವಿಟಿಯು ಹಳೆಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಡಾ. ಆರ್.ಎಚ್. ಗೌಡ ಸೇರಿದಂತೆ ಅವರ ಸ್ನೇಹಿತರು, ಸಂಬಂಧಿಕರು ಹಾಗೂ ಅಕ್ಷರ ಗ್ಲೋಬಲ್ ಶಾಲೆಯ ಸಿಬ್ಬಂದಿಗಳು ಡಾ. ಅನುರಾಧಾ ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿದರು.
WhatsApp Group Join Now
Telegram Group Join Now
Share This Article