ಬಳ್ಳಾರಿ,01: ನಗರದ ಲೋಹಿಯಾ ಪ್ರಕಾಶನದ ಸಿ. ಚನ್ನಬಸವಣ್ಣನವರು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ನೀಡುವ 2026ನೇ ಸಾಲಿನ ಡಾ. ಗುರುಲಿಂಗ ಕಾಪಸೆ ದತ್ತಿ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಾಡಿದ್ದು ಏ. 2ರಂದು ಸಂಜೆ 6 ಗಂಟೆಗೆ ಧಾರವಾಡದ ಕ.ವಿ.ವ.ಸಂಘದ ಶ್ರೀ.ರಾ.ಹ.ದೇಶಪಾಂಡೆ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅಥಣಿ ವಿಮೋಚನಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಹೊಸತು ಪತ್ರಿಕೆ ಸಂಪಾದಕ ಡಾ. ಸಿದ್ಧನಗೌಡ ಪಾಟೀಲ, ಕ.ವಿ.ವ. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ವೀರಣ್ಣ ರಾಜೂರ ಮೊದಲಾದವರು ಭಾಗವಹಿಸಲಿದ್ದಾರೆ.


