ಸ್ವಯಂ ಗಣತಿ: ಮಾಹಿತಿ ದಾಖಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

MK HasiruKranti
ಸ್ವಯಂ ಗಣತಿ: ಮಾಹಿತಿ ದಾಖಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
WhatsApp Group Join Now
Telegram Group Join Now


ಬಳ್ಳಾರಿ,ಏ.03.
ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಗುರುವಾರ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನೂತನ ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಲ್ಯಾಪ್ ಟಾಪ್ ಮೂಲಕ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮಾಹಿತಿ ದಾಖಲಾತಿ ಪೂರ್ಣಗೊಳಿಸಿದರು.
“ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದ್ದು, ನಾಗರಿಕರು ಯಾವುದೇ ಆತಂಕವಿಲ್ಲದೇ ಸ್ವಯಂ ಮಾಹಿತಿಯನ್ನು ದಾಖಲಿಸಬಹುದಾಗಿದೆ.
2026 ರ  ಏಪ್ರಿಲ್ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ https://se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ ಲೈನ್ ನಲ್ಲಿ  ದಾಖಲಿಸಿಕೊಳ್ಳಬಹುದು ಎಂದು ಅವರು ಕರೆ ನೀಡಿದರು.

WhatsApp Group Join Now
Telegram Group Join Now
Share This Article