ಗದಗದಲ್ಲಿ ಪೊಲೀಸ್ ಧ್ವಜ ದಿನಾಚರಣೆ: ಸಮಾಜ ಸ್ವಾಸ್ಥ÷್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು

MK HasiruKranti
ಗದಗದಲ್ಲಿ ಪೊಲೀಸ್ ಧ್ವಜ ದಿನಾಚರಣೆ: ಸಮಾಜ ಸ್ವಾಸ್ಥ÷್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು
WhatsApp Group Join Now
Telegram Group Join Now
ಗದಗ, ಏಪ್ರಿಲ್ ೦೨ (ಕರ್ನಾಟಕ ವಾರ್ತೆ):ಗದಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಗುರುವಾರ ಜಿಲ್ಲಾ ಸಶಸ್ತç ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನ (ಪಿ.ಎಚ್.ಕ್ಯೂ), ಮಲ್ಲಸಮುದ್ರದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಶಿಸ್ತಿನಿಂದ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಎ.ಎಸ್.ಐ ಎಚ್.ಡಿ. ಗಡಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪೊಲೀಸ್ ಇಲಾಖೆ ಸಮಾಜದ ಶಾಂತಿ, ಸುವ್ಯವಸ್ಥೆ ಮತ್ತು ಭದ್ರತೆಯನ್ನು ಕಾಪಾಡುವ ಪ್ರಮುಖ ಕಂಬವಾಗಿದೆ ಎಂದರು.
ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಕಾಪಾಡುವುದು ಮಾತ್ರವಲ್ಲದೆ, ಜನರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಪ್ರಮುಖ ಕರ್ತವ್ಯವಾಗಿದೆ. ಇದನ್ನು ಇಲಾಖೆ ಶಿಸ್ತು ಬದ್ದವಾಗಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಅವರು ಮಾತನಾಡಿ, ಪೊಲೀಸ್ ಧ್ವಜ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸುತ್ತಾ, ದಿಕ ೧೫/೦೧/೧೯೬೫ ರಿಂದ ದ್ವಜ ದಿನಾಚರಣೆ ಮಾಡುತ್ತಾ ಬಂದಿದೆ. ಪೊಲೀಸ್ ಇಲಾಖೆ ಕಾಯ್ದೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ದ್ವಜ ದಿನಾಚರಣೆ ನಡೆದುಬಂದಿದೆ. ಸೇನೆಗೆ ಇದ್ದಂತೆ ಪೊಲೀಸ್ ಇಲಾಖೆಯಲ್ಲಿ ಸಹ ದ್ವಜದಿನಾಚರಣೆ ನಡೆಯುತ್ತಿದೆ ಎಂದರು.
ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಗೌರವಿಸುವ ರೂಡಿನಡೆದುಬಂದಿದೆ. ಪೊಲೀಸ್ ದ್ವಜಾರಾಟಮಾಡಿ ಬಂದ ಹಣದಲ್ಲಿ ಶೇ. ೫೦ ರಷ್ಟು ಕೇಂದ್ರ ಮಿಸಲು ಪಡೆಗೆ ಹಾಗೂ ಶೇ. ೫೦ ರಷ್ಟು ಹಣವನ್ನು ರಾಜ್ಯದ ನಿವೃತ್ತ ಪೋಲಿಸ್ ನಿಧಿಗೆ ಬಳಕೆ ಮಾಡಲಾಗುತ್ತಿದೆ ಇದರಿಂದ ಅನೇಕರಿಗೆ ಸಹಾಯಾಡಲಾಗುತ್ತಿದೆ ಎಂದು ತಿಳಿಸಿದರು.
ಪೊಲೀಸ್ ಧ್ವಜವು ಶೌರ್ಯ, ತ್ಯಾಗ ಮತ್ತು ಕರ್ತವ್ಯನಿಷ್ಠೆಯ ಸಂಕೇತವಾಗಿದ್ದು, ಈ ದಿನದ ಆಚರಣೆ ಮೂಲಕ ಪೊಲೀಸ್ ಸಿಬ್ಬಂದಿಯಲ್ಲಿ ಸೇವಾಭಾವನೆ, ಶಿಸ್ತಿನ ಮೌಲ್ಯಗಳು ಮತ್ತು ದೇಶಭಕ್ತಿಯನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದರು.
ಸಮಾಜದ ಸ್ವಾಸ್ಥ÷್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅಪರಾಧಗಳನ್ನು ತಡೆಗಟ್ಟುವುದು, ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವುದು, ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸ್ಪಂದಿಸುವುದು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವಾರು ಸೇವೆಗಳ ಮೂಲಕ ಪೊಲೀಸರು ಸಮಾಜದ ನೈತಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಸ್ಥಿರವಾಗಿಡಲು ಶ್ರಮಿಸುತ್ತಿದ್ದಾರೆಂದು ಹೇಳಿದರು.

ಕೋವಿಡ್ ಸೇರಿದಂತೆ ಅನಾಹುತ ಸಂದರ್ಭಗಳಲ್ಲಿಯೂ ಪೊಲೀಸ್ ಸಿಬ್ಬಂದಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿ ಜನರ ರಕ್ಷಣೆಗೆ ತಮ್ಮ ಜೀವವನ್ನೇ ಪಣಕ್ಕಿಟ್ಟ ಉದಾಹರಣೆಗಳು ಸಾಕಷ್ಟಿವೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ನುಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹಾಂತೇಶ ಸಜ್ಜನರ, ನರಗುಂದ ಡಿ ವೈ ಎಸ್ ಪಿ ಪ್ರಭು ಗೌಡ ಕೆರೆದಳ್ಳಿ, ಮಹನಿಯರಾದ ಸಂಜನಾ ರೋಹನ್ ಜಗದೀಶ್,
ರಾಷ್ಟç ಪ್ರಶಸ್ತಿ ಪುರಸ್ಕöÈತ ನಿವೃತ್ತ ಶಿಕ್ಷಕ ಎಸ್ ಎನ್ ಬಳ್ಳಾರಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಹಲವು ಹಿರಿಯ ಹಾಗೂ ಕಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

WhatsApp Group Join Now
Telegram Group Join Now
Share This Article