ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಶಾಸಕ ಲಕ್ಷ್ಮಣ ಸವದಿ

MK HasiruKranti
WhatsApp Group Join Now
Telegram Group Join Now
ಅಥಣಿ: ಬಾಬು ಜಗಜೀವನ ರಾಮ್ ಅವರು ಕೇವಲ ಒಬ್ಬ ನಾಯಕರಲ್ಲ, ಅವರು ದೇಶದ ಹಸಿರು ಕ್ರಾಂತಿಯ ಹರಿಕಾರರು. ಅವರ ತತ್ತ್ವಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸ್ಥಳೀಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಬುಜೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದ ಶಾಸಕರು, “ಗಾಂಧೀಜಿ, ಅಂಬೇಡ್ಕರ್ ಹಾಗೂ ಜಗಜೀವನ ರಾಮ್ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರು. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಅವರು ತೋರಿದ ದಕ್ಷತೆ ಇಂದಿನ ಆಡಳಿತಗಾರರಿಗೆ ಮಾದರಿ. ಕೃಷಿ ಕ್ಷೇತ್ರದಲ್ಲಿ ಅವರು ತಂದ ಕ್ರಾಂತಿಕಾರಿ ಬದಲಾವಣೆಗಳಿಂದಾಗಿ ದೇಶ ಆಹಾರ ಭದ್ರತೆ ಪಡೆಯಲು ಸಾಧ್ಯವಾಯಿತು” ಎಂದು ಸ್ಮರಿಸಿದರು.
ಕೇಂದ್ರೀಯ ವಿದ್ಯಾಲಯ: ತಾಲೂಕಿನ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಕೇಂದ್ರೀಯ ವಿದ್ಯಾಲಯ ಆರಂಭವಾಗಿದ್ದು, ಪ್ರವೇಶ ಪ್ರಕ್ರಿಯೆ ಚಾಲನೆಯಲ್ಲಿದೆ. ಇದರ ಸದುಪಯೋಗ ಪಡೆಯಬೇಕು. ಶೀಘ್ರದಲ್ಲೇ ಅಮ್ಮಾಜೇಶ್ವರಿ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಲಿದ್ದು, ಅದೇ ಸಂದರ್ಭದಲ್ಲಿ ಕೃಷಿ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು.
 ಸುಮಾರು 36 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಸುಸಜ್ಜಿತ ವಸತಿ ಶಾಲೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಟಿ. ಎಸ್ ವಂಟಗುಡಿ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹಾಗೂ ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ ಮಾತನಾಡಿದರು. ವೇದಿಕೆಯ ಮೇಲೆ ತಹಸೀಲ್ದಾರ್ ಸಿದ್ರಾಯ ಭೋಸಗಿ, ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ, ಕಾ.ನಿ ಅಧಿಕಾರಿ ಶಿವಾನಂದ ಕಲ್ಲಾಪುರ, ಅಶೋಕ ಗಿಡಿಮನಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಎಮ್. ಆರ್ ಮುಂಜೆ, ವೀರಣ್ಣ ವಾಲಿ, ಸೇರಿದಂತೆ ಪ್ರಮುಖರಾದ ಡಾ. ಅನಿಲ ಸೌದಾಗರ್, ದಿಲೀಪ್ ಕಾಂಬಳೆ, ವಿಲೀನ ಯಳಮಲ್ಲೆ, ಶೇಖರ ಸೌದಾಗರ, ಸದಾಶಿವ ಕ್ಷೀರಸಾಗರ, ಶಿವಾನಂದ ಸೌದಾಗರ, ಸುಂದರ ಸೌದಾಗರ, ನಾರಾಯಣ ಹೊನಕಾಡೆ, ಶಂಕರ ಸಿಂದೆ, ಸಿದ್ರಾಯ ಸನ್ನಕಿ, ವಿಠ್ಠಲ ಕಾಂಬಳೆ, ಕಿಸನ್ ಸೌದಾಗರ, ಮಾಂತೇಶ ಬಾಡಗಿ, ಮಂಜು ಹೋಳಿಕಟ್ಟಿ, ಅಶೋಕ ಕಾಂಬಳೆ, ಸಂತೋಷ ಹೋನಕಾಡೆ, ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article