ಬೆಳಗಾವಿ. ನಗರದ ಧರ್ಮನಾಥ ಭವನ ಹತ್ತಿರವಿರುವ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಕಾರ್ಯಾಲಯದ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ನಂತರ ಮುಖಂಡರು,ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಅರವಿಂದ ಪಾಟೀಲ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮುಖಂಡರಾದ ಮುರಗೇಂದ್ರಗೌಡ ಪಾಟೀಲ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ಮಹೇಶ ಮೋಹಿತೆ,ಜಿಲ್ಲಾ ಉಪಾಧ್ಯಕ್ಷರಾದ ವಿನಯ ಕದಂ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಹನುಮಸಾಗರ, ಸಾಮಾಜಿಕ ಜಾಲತಾಣ ರಾಜ್ಯ ಸಮಿತಿ ಸದಸ್ಯರಾದ ನೀತಿನ ಚೌಗಲೆ, ಕೋಶಾಧ್ಯಕ್ಷರಾದ ಸಂತೋಷ ದೇಶನೂರ, ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕರಾದ ಸುಭಾಷ ಸಣ್ಣವೀರಪ್ಪನವರ, ಕಾರ್ಯಾಲಯ ಕಾರ್ಯದರ್ಶಿ ಪ್ರವೀಣ ಮಾಳೆದವರ, ಮಂಜು ಅಷ್ಟಗಿ ಹಾಗೂ ಪ್ರಮುಖರಿದ್ದರು.


