ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಬಳ್ಳಾರಿ-ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

MK HasiruKranti
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಬಳ್ಳಾರಿ-ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ
WhatsApp Group Join Now
Telegram Group Join Now
ಬಳ್ಳಾರಿ, ಏ.07: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು.
ನಗರದ ಸಿದ್ಧಾರ್ಥ್ ನಗರದಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಆಸ್ತಿ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು. ಶಿವಣ್ಣ ವಿರುದ್ಧ ಹಲವು ದೂರುಗಳು ಬಂದ ಹಿನ್ನೆಲೆ ಈ ದಾಳಿ ನಡೆದಿದ್ದು, ಪರಿಶೀಲನೆ ವೇಳೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿರುವ ಸಾಧ್ಯತೆ ಇದೆ. ತನಿಖೆ ಮುಂದುವರಿದಿದ್ದು, ಪೂರ್ಣ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿವೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಶಿವಮೊಗ್ಗದಲ್ಲಿಯೂ ಲೋಕಾಯುಕ್ತ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿತರ ಮನೆಗಳು ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡರು.
ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆ, ಶಿಕಾರಿಪುರದ ಚನ್ನಕೇಶವ ನಗರ, ತರಲಘಟ್ಟದ ತೋಟದ ಮನೆ ಹಾಗೂ ಸಾಗರ ತಾಲೂಕಿನ ಆಚಾಪುರದಲ್ಲಿರುವ ಮಲ್ನಾಡ್ ಇಂಟರ್‌ನ್ಯಾಶನಲ್ ಶಾಲೆಯ ಮೇಲೆ ದಾಳಿ ನಡೆದಿದೆ. ಅಲ್ಲದೆ ಬಿಸಿಎಂ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರ ಚಾಲುಕ್ಯನಗರದ ನಿವಾಸ ಹಾಗೂ ದೇವರಾಜ್ ಅರಸ್ ಭವನದಲ್ಲಿರುವ ಕಚೇರಿಯಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಶಿವಮೊಗ್ಗ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿ ಬೆಳಗ್ಗಿನ ಜಾವವೇ ದಾಳಿ ನಡೆಸಲಾಗಿದ್ದು, ಈ ವೇಳೆ ಅನೇಕ ಪ್ರಮುಖ ದಾಖಲೆಗಳು ಪತ್ತೆಯಾಗಿವೆ. ಸಂಬಂಧಿತ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ತನಿಖೆ ಮುಂದುವರಿದಿದೆ.
WhatsApp Group Join Now
Telegram Group Join Now
Share This Article